Saturday, July 13, 2024
spot_img
spot_img
spot_img
spot_img
spot_img
spot_img

ಎಚ್‌ಎಸ್‌ಆರ್‌ಪಿ (HSRP) ನಂಬರ್‌ ಪ್ಲೇಟ್‌ ಅಳವಡಿಸಲು ಇನ್ನು ಉಳಿದಿರುವುದು ಕೇವಲ 16 ದಿನ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ಫೆಬ್ರವರಿ 17ರವರೆಗೂ ಕಾಲಾವಕಾಶವಿದ್ದು, ಇದಕ್ಕೆ ಇನ್ನಿರುವುದು ಕೇವಲ 16 ದಿನ ಮಾತ್ರ.

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate) ಕಡ್ಡಾಯವಾಗಿ ಅಳವಡಿಸಲು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ/ ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ಆದರೆ ಅದನ್ನು ಇದೇ ಫೆ. 17 ರ ವರೆಗೆ ಕಾಲಾವಕಾಶವನ್ನು ಮುಂದುವರಿಸಿತ್ತು, ಹೀಗಾಗಿ ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ/ ಅಸ್ತಿತ್ವದಲ್ಲಿರುವ ವಾಹನಗಳು) HSRP ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು.

ಎಚ್‌ಎಸ್‌ಆರ್‌ಪಿ ಎಂದರೆ, ಅಲ್ಯೂಮಿನಿಯಂ ಲೋಹದಿಂದ ಮಾಡಿರುವ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.

ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ, HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿಕೊಳ್ಳಬಹುದು.

HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.

spot_img
spot_img
- Advertisment -spot_img