Sunday, September 8, 2024
spot_img
spot_img
spot_img
spot_img
spot_img
spot_img
spot_img

10 ನೇ ತರಗತಿ ಪಾಸಾಗಿದ್ದೀರಾ.? ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೆ ಸಿಗುತ್ತೆ ನೌಕರಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ನೀವು 10 ನೇ ತರಗತಿ ಪಾಸಾಗಿದ್ದೀರಾ.? ಹಾಗಾದ್ರೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆ ಇಲ್ಲದೇ ನೇರವಾಗಿ ಉದ್ಯೋಗವನ್ನು ಪಡೆಯಲು ಅವಕಾಶವಿದೆ. ಇದಕ್ಕಾಗಿ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಅತೀ ಶೀಘ್ರದಲ್ಲೇ SBI ಬ್ಯಾಂಕ್‌ನಲ್ಲಿ 12,000 ಹುದ್ದೆಗಳ ನೇಮಕಾತಿ.!

ವಯೋಮಿತಿ : 

ರಕ್ಷಣಾ ಸಚಿವಾಲಯದ ಅಗ್ನಿಶಾಮಕ ಸಿಬ್ಬಂದಿಯ ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ವಯಸ್ಸು 56 ವರ್ಷಕ್ಕಿಂತ ಹೆಚ್ಚಿಗೆ ಇರಬಾರದು.

ಶೈಕ್ಷಣಿಕ ಅರ್ಹತೆ : 

ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಪಾಸಾಗಿರಬೇಕು.

ಪೋಸ್ಟ್‌ಗಳ ವಿವರಗಳು : 

ಈ ನೇಮಕಾತಿಯಡಿಯಲ್ಲಿ, ಅರ್ಹ ಅಭ್ಯರ್ಥಿಗಳನ್ನು ಒಟ್ಟು 40 ಹುದ್ದೆಗಳಿಗೆ ನೇಮಕ ಮಾಡಲಾಗುವುದು. ರಕ್ಷಣಾ ಸಚಿವಾಲಯವು ಕಣ್ಣೂರು ಮತ್ತು ಕೊಚ್ಚಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಇದನ್ನು ಓದಿ : BHEL Recruitment : ಡಿಪ್ಲೋಮಾ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ.!

ವಲಯವಾರು ಹುದ್ದೆಗಳ ವಿವರ : 

  • ಕಣ್ಣೂರಿನ ಒಟ್ಟಾರೆ ಹುದ್ದೆಗಳು – 02.
  • ಕೊಚ್ಚಿಯಲ್ಲಿ ಒಟ್ಟು ಹುದ್ದೆಗಳು – 38.

ವೇತನ ವಿವರ : 

ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರೂ.ಗಳಿಂದ 63,200 ರೂ.ವರೆಗಿನ ವೇತನವನ್ನು ನೀಡಲಾಗುತ್ತದೆ.

ನೇಮಕಾತಿ ಪ್ರಕ್ರಿಯೆ :

ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಯಾವುದೇ ಲಿಖಿತ ಪರೀಕ್ಷೆಯನ್ನು ಇರುವುದಿಲ್ಲಾ. ಅರ್ಜಿ ಸಲ್ಲಿಸಿದ ನಂತರ, ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು. ಇದಕ್ಕಾಗಿ ಅಭ್ಯರ್ಥಿಗಳಿಗೆ ದಿನಾಂಕವನ್ನು ಮೊದಲೇ ತಿಳಿಸಲಾಗುತ್ತದೆ.

ಇದನ್ನು ಓದಿ : HALನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.!

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 

  • 23 ಮೇ 2024 ಅರ್ಜಿ ಸಲ್ಲಿಸಲು ಕೊನೆ ದಿನಾಂಕ.

ಅರ್ಹ, ಆಸಕ್ತ ಅಭ್ಯರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ : 

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ mod.gov.in ನಲ್ಲಿ ನೀಡಲಾದ ಫಾರ್ಮ್ಯಾಟ್ ಡೌನ್‌ಲೋಡ್ ಮಾಡಿಕೊಳ್ಳಿ. ನಂತರ ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ, ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ಭರ್ತಿ ಮಾಡಿ. ಬಳಿಕ ಎಲ್ಲಾ ಕಡ್ಡಾಯ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೊದಲು ಸ್ಪೀಡ್ ಪೋಸ್ಟ್ ಮೂಲಕ ಆ ಅರ್ಜಿಯನ್ನು ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ಹೆಡ್‌ಕ್ವಾರ್ಟರ್ಸ್ ಸದರ್ನ್ ನೇವಲ್ ಕಮಾಂಡ್ ನೇವಲ್ ಬೇಸ್, ಕೊಚ್ಚಿ – 682004 ಈ ವಿಳಾಸಕ್ಕೆ ಕಳುಹಿಸಬೇಕು.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img