Tuesday, October 22, 2024
spot_img
spot_img
spot_img
spot_img
spot_img
spot_img
spot_img

ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ ; 3.64 ಲಕ್ಷ ರದ್ದು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಅನರ್ಹರೂ ಕೂಡ ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ​ (ಕಾರ್ಡ್) ಹೊಂದುವ ಮೂಲಕ ಪಡೆಯುತ್ತಿದ್ದಾರೆ. ಹೀಗೆ ಸವಲತ್ತುಗಳನ್ನು ಪಡೆಯುತ್ತಿರುವವರನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿರುವ ಆಹಾರ ಇಲಾಖೆ ಅನರ್ಹರ ಚೀಟಿಗಳನ್ನು ರದ್ದುಗೊಳಿಸುತ್ತಿದೆ. ಇದೀಗ ಒಟ್ಟು 14 ಲಕ್ಷ ಕಾರ್ಡ್​​ಗಳನ್ನು ಗುರುತಿಸಿರುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಅಂತ್ಯೋದಯ & ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ರಾಜ್ಯ ಸರ್ಕಾರದಿಂದ ಖಡಕ್​ ಸೂಚನೆ.!

ಆಹಾರ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

ಕರ್ನಾಟಕದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಅನೇಕ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಇದೇ ವೇಳೆ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.

ಇದನ್ನು ಓದಿ : Health : ಟೀ ಜೊತೆ ರಸ್ಕ್ ತಿನ್ನುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ.

ಅಹರ್ನತೆಗೆ ಮಾನದಂಡವೇನು?

  • 6 ತಿಂಗಳವರೆಗೆ ಪಡಿತರ ಪಡೆಯದಿರುವವರು ಮತ್ತು
  • ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುವುದು.
WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img