ಜನಸ್ಪಂದನ ನ್ಯೂಸ್, ಚಿತ್ರದುರ್ಗ : 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟು (Fire) ಸುಟ್ಟು ಹಾಕಿರುವ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ನಗರದ ಹೊರವಲಯದ ಗೋನೂರು ಬ್ರಿಡ್ಜ್ (ಹೊಸ ಹೆದ್ದಾರಿ) ಸಮೀಪದ ಖಾಸಗಿ ಜಮೀನಿನಲ್ಲಿ ಬೆಂಕಿಯಿಟ್ಟು (Fire) ಸುಟ್ಟು ಹಾಕಿದ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತಳನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಮೃತದೇಹವು ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದೆ. ವರ್ಷಿತಾ ಚಿತ್ರದುರ್ಗದಲ್ಲಿ ವಾಸ್ತವ್ಯವಿದ್ದು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್ ಸವಾರ ; ವಿಡಿಯೋ ವೈರಲ್.!
ಅರೆಬರೆ ಸುಟ್ಟ (Fire) ಸ್ಥಿತಿಯಲ್ಲಿ ಶವ ಪತ್ತೆಯಾದ ಕಾರಣ, ಅತ್ಯಾಚಾರ ಮಾಡಿ ಕೊಲೆಗೈದು ಪೆಟ್ರೋಲ್ ಎರಚಿ ಸುಟ್ಟಿರಬಹುದೆಂಬ (Fire) ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಪೊಲೀಸರು ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ನಿಜಾಸಕ್ತಿ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಮಧುಮೇಹ ನಿಯಂತ್ರಣಕ್ಕೆ ಫಾಲ್ಸಾ (Falsa) ಅಥವಾ ಚೂರಿ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.! ಆರೋಗ್ಯಕರ ಆಹಾರ ಪದ್ಧತಿ ಮಧುಮೇಹ ನಿಯಂತ್ರಣಕ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಹಣ್ಣುಗಳು ದೈನಂದಿನ ಆಹಾರದ ಒಂದು ಅವಿಭಾಜ್ಯ ಭಾಗವಾಗಿದ್ದರೂ, ಮಧುಮೇಹಿಗಳು ಎಲ್ಲಾ ಹಣ್ಣುಗಳನ್ನು ಸೇವಿಸುವುದು ಸೂಕ್ತವಲ್ಲ.
ಕೆಲವು ಹಣ್ಣುಗಳಲ್ಲಿ ಸಕ್ಕರೆ ಅಂಶ ಹೆಚ್ಚು ಇರುವುದರಿಂದ ಅದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಫಾಲ್ಸಾ ಹಣ್ಣು (Falsa) ಅಥವಾ ಚೂರಿ ಹಣ್ಣು ಮಧುಮೇಹಿಗಳಿಗೆ ಉತ್ತಮ ಆಯ್ಕೆಯಾಗಬಹುದು.
ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
ಇದರಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೋಡಿಯಂ, ಕ್ಯಾಲ್ಸಿಯಂ, ವಿಟಮಿನ್ A, ವಿಟಮಿನ್ C ಸೇರಿದಂತೆ ಹಲವು ಅಗತ್ಯ ಪೋಷಕಾಂಶಗಳಿವೆ.
ಫಾಲ್ಸಾ (Falsa) ಹಣ್ಣಿನ ಆರೋಗ್ಯಕರ ಲಾಭಗಳು :
- ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡುತ್ತದೆ.
- ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕಿನಿಂದ ರಕ್ಷಿಸುತ್ತದೆ.
- ಪುರುಷರಲ್ಲಿ ವೀರ್ಯದ ಗುಣಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.
- ಜ್ಯೂಸ್ ರೂಪದಲ್ಲಿ ಸೇವಿಸಿದರೆ ದೇಹಕ್ಕೆ ಟಾನಿಕ್ ಆಗಿ ಕೆಲಸ ಮಾಡುತ್ತದೆ.
- ಪಿತ್ತ ಸಮಸ್ಯೆ ನಿಯಂತ್ರಿಸಲು ಸಹಕಾರಿಯಾಗಿದೆ.
- ರಕ್ತದೊತ್ತಡವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.
- ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್ ಸವಾರ ; ವಿಡಿಯೋ ವೈರಲ್.!
ಫಾಲ್ಸಾ (Falsa) ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ. ಇದರಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗುವುದನ್ನು ತಡೆಯಬಹುದು. ಜೊತೆಗೆ, ಫಾಲ್ಸಾ ಹಣ್ಣಿನಲ್ಲಿ ಇರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್‌ಗಳು ಮಧುಮೇಹಿಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ.
ಮಧುಮೇಹಿಗಳು ಫಾಲ್ಸಾ (Falsa) ಹಣ್ಣನ್ನು ನೇರವಾಗಿ ತಿನ್ನಬಹುದು ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ಜ್ಯೂಸ್ ತಯಾರಿಸುವಾಗ ಸಕ್ಕರೆ ಸೇರಿಸದೇ ಸೇವಿಸುವುದು ಮುಖ್ಯ.
ಸಂಪಾದಕೀಯ : ಈ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದ್ದು, ಯಾವುದೇ ಹಣ್ಣನ್ನು ಔಷಧಿಯಂತೆ ಬಳಸುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.
> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.