ಗುರುವಾರ, ಡಿಸೆಂಬರ್ 4, 2025

Janaspandhan News

HomeInternational NewsZooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.
spot_img
spot_img
spot_img

Zooನಲ್ಲಿ ಹುಚ್ಚಾಟಕ್ಕೆ ಹೋಗಿದ 19ರ ಯುವಕ ; ಕ್ಷಣಾರ್ಧದಲ್ಲಿ ಸಿಂಹಕ್ಕೆ ಆಹಾರ! ವಿಡಿಯೋ ವೈರಲ್.

- Advertisement -

ಜನಸ್ಪಂದನ ನ್ಯೂಸ್‌, ಬ್ರೆಝಿಲ್‌ : ಬ್ರೆಝಿಲ್‌ (Brazil) ನ ಜೋವೊ ಪೆಸ್ಸೋವಾ ಮೃಗಾಲಯ (Zoo) ದಲ್ಲಿ 19 ವರ್ಷದ ಯುವಕನೊಬ್ಬ ಸಿಂಹದ ದಾಳಿಗೆ ಬಲಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಘಟನೆಯ ಕ್ರೂರತೆಯನ್ನು ಕಂಡ ಜನ ಆಘಾತಗೊಂಡಿದ್ದಾರೆ.

ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ, ಯುವಕನು ಉದ್ದೇಶಪೂರ್ವಕವಾಗಿ ಮೃಗಾಲಯದ (Zoo) ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾನೆ. ಅವನು ಮರದ ಮೂಲಕ ಕೆಳಭಾಗಕ್ಕೆ ಇಳಿಯುತ್ತಿದ್ದಾಗ, ಹತ್ತಿರದಲ್ಲೇ ತಿರುಗಾಡುತ್ತಿದ್ದ ಸಿಂಹ ಅವನ ಚಲನವಲನವನ್ನು ಗಮನಿಸಿ ಕ್ಷಣಾರ್ಧದಲ್ಲೇ ಅವನ ಮೇಲೆ ಹಲ್ಲೆ ನಡೆಸಿತು.

ಇದನ್ನು ಓದಿ : ಆಸ್ಪತ್ರೆಯಲ್ಲಿ ಡ್ಯೂಟಿ ವೇಳೆ ‌Dance ಮಾಡಿದ ವೈದ್ಯ ; ವಿಡಿಯೋ ವೈರಲ್.

ಅಕಸ್ಮಾತ್ ದಾಳಿಯಿಂದ ಭಯಗೊಂಡ ಯುವಕ ಮರವನ್ನು ಮತ್ತೆ ಏರಲು ಪ್ರಯತ್ನಿಸಿದರೂ, ಸಿಂಹದ ಮಾರಣಾಂತಿಕ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ದಾಳಿಯಿಂದ ತೀವ್ರವಾಗಿ ಗಾಯಗೊಂಡ ಯುವಕ ಸೆಕೆಂಡ್‌ಗಳಲ್ಲಿ ನೆಲಕ್ಕುರುಳಿದನು ಮತ್ತು ಗಂಭೀರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟನು. ಘಟನೆಯ ವೇಳೆ ಅಲ್ಲಿದ್ದ ಪ್ರವಾಸಿಗರು ಈ ಕ್ರೂರ ದೃಶ್ಯವನ್ನು ಕಣ್ಣು ಕಂಡು ಬೆಚ್ಚಿಬಿದ್ದರು ಮತ್ತು ಕೆಲವರು ಆತಂಕದಿಂದ ಕಿರುಚುತ್ತಿದ್ದರು. ವಿಡಿಯೋದಲ್ಲಿ ಜನರ ಗಾಬರಿಯಾಗಿ ಚಿರಾಡುವುದು ಕೂಡ ವಿಡಿಯೋದಲ್ಲಿ ಕೇಳಬಹುದಾಗಿದೆ.

ಇದನ್ನು ಓದಿ : ದೆಹಲಿ : 6 ವರ್ಷದ ಬಾಲಕನ ಮೇಲೆ Pitbull ನಾಯಿ ದಾಳಿ ; ಭಯಾನಕ ವಿಡಿಯೋ ಸೆರೆ

ಘಟನೆಯ ನಂತರ ಮೃಗಾಲಯದ (Zoo) ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಯುವಕನನ್ನು ರಕ್ಷಿಸಲು ತಕ್ಷಣ ಸ್ಥಳಕ್ಕೆ ಧಾವಿಸಿದರು. ಆದರೆ ಆ ವೇಳೆಗೆ ಸಿಂಹ ಈಗಾಗಲೇ ಯುವಕನಿಗೆ ಮಾರಕ ಗಾಯಗಳನ್ನುಂಟು ಮಾಡಿದ್ದರಿಂದ ಅವನನ್ನು ಉಳಿಸಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸಿಬ್ಬಂದಿ ಯುವಕನು ಸ್ಥಳದಲ್ಲೇ ಮೃತಪಟ್ಟಿರುವುದನ್ನು ದೃಢಪಡಿಸಿದರು.

ಇದರ ನಡುವೆ, ಯುವಕನು ನಿರ್ಬಂಧಿತ ಮತ್ತು ಅಪಾಯಕರ ಪ್ರದೇಶಕ್ಕೆ ಏಕೆ ನುಗ್ಗಿದ್ದಾನೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೃಗಾಲಯದ (Zoo) ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಕೆಲವು ಪ್ರತ್ಯಕ್ಷದರ್ಶಿಗಳು, ಯುವಕನು ಪ್ರದೇಶವನ್ನು ಉದ್ದೇಶಪೂರ್ವಕವಾಗಿ ಪ್ರವೇಶಿಸಿದ್ದರಿಂದ ಆತ ಯಾವುದೋ ಸಾಹಸ ಮಾಡಲು ಯತ್ನಿಸಿದ್ದಾನೆಂದು ಶಂಕಿಸಿದ್ದಾರೆ. ಆದರೆ ನಿಖರ ಕಾರಣ ತನಿಖೆ ಪೂರ್ಣವಾದ ನಂತರವೇ ತಿಳಿದುಬರುವ ಸಾಧ್ಯತೆ ಇದೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ಈ ಘಟನೆ ನಂತರ, ಮೃಗಾಲಯದ (Zoo) ಭದ್ರತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಹಲವರು ನಿರ್ಬಂಧಿತ ಪ್ರದೇಶಕ್ಕೆ ಯಾರಾದರೂ ಸುಲಭವಾಗಿ ಪ್ರವೇಶಿಸಬಲ್ಲ ಸ್ಥಿತಿ ಗಂಭೀರ ದುರಂತಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಝೂ (Zoo) ನಲ್ಲಿ ಸಿಂಹದ ದಾಳಿಯ ವಿಡಿಯೋ :


ಕಾಫಿ ತೋಟದಲ್ಲಿ ನಾಪತ್ತೆಯಾದ 2 ವರ್ಷದ ಬಾಲಕಿಯನ್ನು ಜೀವಂತವಾಗಿ ಪತ್ತೆಹಚ್ಚಿದ ಸಾಕು Dog.

missing girl found by smart dog

ಜನಸ್ಪಂದನ ನ್ಯೂಸ್‌, ಮಡಿಕೇರಿ : ಕೊಡಗು ಜಿಲ್ಲೆಯ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯನ್ನು, ಮರುದಿನ ಸಾಕು ನಾಯಿ (Dog) ಯ ಬುದ್ಧಿವಂತಿಕೆಯೊಂದು ಸುರಕ್ಷಿತವಾಗಿ ಪತ್ತೆಹಚ್ಚಲಾಗಿದೆ. ಶನಿವಾರ ಮಧ್ಯಾಹ್ನ ಕಾಣೆಯಾಗಿದ್ದ ಮಗು, ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಸಂಯುಕ್ತ ಹುಡುಕಾಟದ ನಂತರ ಪೋಷಕರ ಮಡಿಲಿಗೆ ಮರಳಿದ್ದು ಘಟನೆಯ ಅಂತ್ಯ ಸಂತೋಷದಲ್ಲಿ ಕೊನೆಗೊಂಡಿದೆ.

ಇಡೀ ರಾತ್ರಿ ಕತ್ತಲಾದ ತೋಟದಲ್ಲಿ ಒಂಟಿಯಾಗಿ ಕಳೆದಿದ್ದ ಮಗು, ಮರುದಿನ ಬೆಳಿಗ್ಗೆ ಹುಡುಕಾಟ ನಡೆಸಿದ ಸಂದರ್ಭದಲ್ಲಿ ನಾಯಿ (Dog) ಯೊಂದು ಪತ್ತೆಹಚ್ಚಿ ತಾಯಿಯ ಮಡಿಲಿಗೆ ತಲುಪಿಸಿದೆ.

ಇದನ್ನು ಓದಿ : Free ಟಿಕೆಟ್ ಪಡೆದು ಮಾರ್ಗ ಮಧ್ಯೆ ಇಳಿದ ಮಹಿಳೆ ; ಪ್ರಶ್ನಿಸಿದ ಕಂಡಕ್ಟರ್ ಮೇಲೆ ಹಲ್ಲೆ ; ವಿಡಿಯೋ ವೈರಲ್.

ನಾಪತ್ತೆಯಾಗಿದ್ದ ಮಗು :

ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದ ದಂಪತಿ ಒಬ್ಬರ 2 ವರ್ಷದ ಮಗು ಸುನನ್ಯಾ, ಶನಿವಾರ ಮಧ್ಯಾಹ್ನ ಕಾಫಿ ತೋಟದಲ್ಲಿ ಕಾಣೆಯಾಗಿತ್ತು. ಮಗು ಆಕೆಯ ಪೋಷಕರೊಂದಿಗೆ ಶರಿ ಗಣಪತಿ ಎಂಬವರ ತೋಟಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ.

ಮೊಬೈಲ್ ನೋಡುತ್ತಿದ್ದಾಗ ಮಗು ನಾಪತ್ತೆ :

ಶನಿವಾರ ಮಧ್ಯಾಹ್ನ ತೋಟದಲ್ಲಿ ನೆಟ್‌ವರ್ಕ್ ಸಿಗುವ ಜಾಗದಲ್ಲಿ ಸುನನ್ಯಾ ತಾಯಿ ಮೊಬೈಲ್ ನೋಡುತ್ತಾ ಕುಳಿತಿದ್ದರು. ಇದೇ ವೇಳೆ ಮಗು ಶೌಚಕ್ಕೆಂದು ಹತ್ತಿರದ ಕಾಫಿ ಗಿಡಗಳ ಕಡೆಗೆ ಹೋಗಿತ್ತು. ನಂತರ ಮಗು ಹಿಂದಿರುಗದೆ ತೋಟದ ಒಳಭಾಗದಲ್ಲಿ ದಾರಿ ತಪ್ಪಿ ನಡೆದುಕೊಂಡು ಹೋಗಿದೆ ಎಂದು ಶಂಕಿಸಲಾಗಿದೆ.

ಇದನ್ನು ಓದಿ : ಚಿನ್ನಾಭರಣ ದರೋಡೆ ಪ್ರಕರಣ : ಓರ್ವ PSI ವಜಾ, ಇನ್ನೋರ್ವ ಸಸ್ಪೆಂಡ್.

ರಾತ್ರಿ ತುಂಬಾ ಹುಡುಕಾಟ — ಸಿಗದ ಸುಳಿವು :

ಮಗು ನಾಪತ್ತೆಯಾಗುತ್ತಿದ್ದಂತೇ ಪೋಷಕರು, ಸ್ಥಳೀಯರು, ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಹುಡುಕಾಟ ನಡೆಸಿದರೂ ಸುಳಿವೂ ಸಿಗಲಿಲ್ಲ. ಮಗು ಅಳದೇ ಇದ್ದದ್ದರಿಂದ ಹುಡುಕುವುದು ಇನ್ನಷ್ಟು ಕಷ್ಟವಾಗಿತ್ತು ಎನ್ನಲಾಗಿದೆ. ಹುಲಿ ದಾಳಿ ಕೂಡ ಸಂಭವಿಸಿರಬಹುದೆಂಬ ಭಯದಿಂದ ಅರಣ್ಯ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದರು.

ಅರಣ್ಯ ಇಲಾಖೆ, ಪೊಲೀಸರು ಹಾಗೂ ಗ್ರಾಮಸ್ಥರು ಸೇರಿ ಸುಮಾರು 70–80 ಸದಸ್ಯರ ತಂಡ ರಾತ್ರಿ ಹೊತ್ತಿಗೂ ಹುಡುಕಾಟ ಮುಂದುವರೆಸಿದರು.

ಮರುದಿನ ನಾಯಿ (Dog) ಯೊಂದು ಪತ್ತೆ ಮಾಡಿ ಜೀವ ಉಳಿಸಿದ ಕ್ಷಣ :

ಭಾನುವಾರ ಬೆಳಿಗ್ಗೆ, ಸುನನ್ಯಾ ಇರುವ ಸ್ಥಳದಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಅನಿಲ್ ಕಾಳಪ್ಪ ಅವರ ತೋಟದಲ್ಲಿ ಸಾಕಲಾದ ‘ಓರಿಯೋ’ ಎಂಬ ನಾಯಿ (Dog) ಏಕಾಏಕಿ ಬೊಗಳಲಾರಂಭಿಸಿತು. ಅನುಮಾನಗೊಂಡ ತೋಟದ ಮಾಲೀಕರು ಅಲ್ಲಿಗೆ ಹೋಗಿ ನೋಡಿದಾಗ, ಮಗು ಕಾಫಿ ಗಿಡಗಳ ಮಧ್ಯದಲ್ಲಿ ಕುಳಿತಿರುವುದು ಕಂಡುಬಂದಿದೆ.

ಇದನ್ನು ಓದಿ : ಹಳಿ ಮೇಲೆ ಜೋಡಿ ರೋಮಾನ್ಸ್‌ : ಚಲಿಸಿದ ಗೂಡ್ಸ್‌ ರೈಲು ; ಮುಂದೆನಾಯ್ತು? Video ನೋಡಿ.

ನಾಯಿ (Dog) ಪತ್ತೆ ಹಚ್ಚಿದ ಮಗು ಅಳದೆ, ಕೇವಲ ಆಯಾಸಗೊಂಡ ಸ್ಥಿತಿಯಲ್ಲಿ ಮಾತ್ರ ಕಂಡುಬಂತು. ನಂತರ ಸ್ಥಳೀಯರು ಮಗುವನ್ನು ಎತ್ತಿಕೊಂಡು ಪೋಷಕರ ಬಳಿ ತಲುಪಿಸಿದರು. ಮಗಳನ್ನ ಮತ್ತೆ ನೋಡಿದ ಪೋಷಕರು ಭಾವೋದ್ರಿಕ್ತರಾದರು.

ಸ್ಥಳೀಯರ ಧೈರ್ಯ ಮತ್ತು ನಾಯಿಯ ಜಾಣ್ಮೆಗೆ ಪ್ರಶಂಸೆ :

ಸುನನ್ಯಾ ಪತ್ತೆಯಾದ ಸುದ್ದಿ ಹರಿದಾಡುತ್ತಿದ್ದಂತೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಾಯಿ (Dog) ಯ ಜಾಣ್ಮೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಳದೆ, ಶಾಂತವಾಗಿದ್ದ ಮಗುವನ್ನು ಪತ್ತೆ ಮಾಡುವುದು ಕಷ್ಟಕರವಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಆರೋಗ್ಯ ಸ್ಥಿತಿ :

ನಾಯಿ (Dog) ಪತ್ತೆ ಹಚ್ಚಿದ ಮಗು ಸದ್ಯ ಸುರಕ್ಷಿತವಾಗಿದೆ ಮತ್ತು ವೈದ್ಯಕೀಯ ತಪಾಸಣೆಯ ನಂತರ ಮನೆಗೆ ಕರೆದೊಯ್ಯಲಾಗಿದೆ. ಯಾವುದೇ ಗಂಭೀರ ಗಾಯಗಳಿಲ್ಲ.

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

- Advertisement -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments