ಜನಸ್ಪಂದನ ನ್ಯೂಸ್, ಡೆಸ್ಕ್ : ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬಾತನ ಮೊಬೈಲ್‌ನಲ್ಲಿ ಸುಮಾರು 5000 ನಗ್ನ ವಿಡಿಯೋಗಳು ಪತ್ತೆಯಾಗಿವೆ.
ಕಾಮುಕ ಚಿತ್ರಕಲಾ ಶಿಕ್ಷಕ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಮೊಬೈಲ್‌ನಲ್ಲಿ ನೋಡುತ್ತಾ ಆನಂದಪಡುತ್ತಿದ್ದನಂತೆ.
ಇದನ್ನು ಓದಿ : Health : ಸೊಂಟದ ಸುತ್ತಮುತ್ತಲಿನ ಕೊಬ್ಬು ಕರಗಬೇಕಾ? ವಾಕ್ ಮಾಡುವಾಗ ಈ ವಿಧಾನ ಅನುಸರಿಸಿ.
ಅಲ್ಲದೇ ಮೊಬೈಲ್‌ನಲ್ಲಿ ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿ ಇಟ್ಟುಕೊಂಡು, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಶಿಕ್ಷಕನ ಕೃತ್ಯ ನಿಜಕ್ಕೂ ಅಸಭ್ಯ ಹಾಗೂ ಭಯಾನಕವಾಗಿದೆ. ಇಂತಹ ಪ್ರಕರಣವನ್ನು ರದ್ದುಪಡಿಸಲಾಗದು ಎಂದು ಕೋರ್ಟ್ ಹೇಳಿದೆ. ಫೋಟೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಆಸಭ್ಯ ರೀತಿಯಲ್ಲಿ ಪ್ರದರ್ಶಿಸುವುದು ಲೈಂಗಿಕ ಕಿರುಕುಳವಾಗುತ್ತದೆ ಎಂದು ಹೇಳಿದೆ.
ವಿದ್ಯಾರ್ಥಿಗಳಿಂದ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿತ್ತು. ತನಿಖೆ ವೇಳೆ ಶಿಕ್ಷಕ ಮುನಿಯಪ್ಪನ 4 ಮೊಬೈಲ್ಗಳನ್ನು ಸೀಜ್ ಮಾಡಲಾಗಿತ್ತು.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಮೊಬೈಲ್ ಪರಿಶೀಲನೆ ಮಾಡಿದಾಗ ಹೆಣ್ಣುಮಕ್ಕಳ ನಗ್ನ ವಿಡಿಯೋ, ಫೋಟೋಗಳು ಪತ್ತೆಯಾಗಿದ್ದವು. ಹೀಗಾಗಿ ಶಿಕ್ಷಕನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
2023ರ ಡಿಸೆಂಬರ್ 17ರಂದು ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದ್ದ ಪ್ರಕರಣ ಇದಾಗಿದೆ. ಆ ಸಂದರ್ಭದಲ್ಲಿ, ಮಕ್ಕಳಿಗೆ ಶಿಕ್ಷಕ ಚಿತ್ರಹಿಂಸೆ ನೀಡಿ ರೆಕಾರ್ಡ್ ಮಾಡಿದ್ದ ವಿಡಿಯೋ ವೈರಲ್ ಕೂಡ ಆಗಿತ್ತು.