Saturday, November 9, 2024
spot_imgspot_img
spot_img
spot_img
spot_img
spot_img
spot_img

75,000 ರೂ. ಗಿಂತ ಕಡಿಮೆ ರೇಟ್ ಇರುವ ಫೇಮಸ್ ಬೈಕ್‌ಗಳಿವು.!

WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಗೆ ಕೈಗೆಟುಕುವ ಉತ್ತಮ ಬೈಕ್ ಗಳು ಲಭ್ಯವಿವೆ. ಬಹಳಷ್ಟು ಜನರಿಗೆ ಯಾವ ಬೈಕ್ ತೊಗೊಂಡ್ರೆ ಒಳ್ಳೆಯದು ಅಂತ ಗೊತ್ತಿರುವುದಿಲ್ಲ. ನಿಮಗೆ ಉಪಯುಕ್ತ ಮಾಹಿತಿ ಇಲ್ಲಿದೆ.

ಟಿವಿಎಸ್ :

* 10 ಲೀ. ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿರುವ ಟಿವಿಎಸ್ ಸ್ಪೋರ್ಟ್, ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.‌ ಅಲ್ಲದೇ 4-ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

* 8.19 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಟಿವಿಎಸ್ ಸ್ಪೋರ್ಟ್ ಕೂಡ ಜನಪ್ರಿಯ ಬೈಕ್ ಆಗಿದೆ.

* 109.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂ. 67,320 ರಿಂದ ರೂ. 72,033 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಪ್ಯಾನೆಲ್‌ ಸೇರಿದಂತೆ ಅನೇಕ ವೈಶಿಷ್ಟ್ಯಗಳನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ :

* ಈ ಹೊಸ ಹೀರೋ 109 ಕೆಜಿ ತೂಕವಿದ್ದು, ರೆಡ್- ಬ್ಲ್ಯಾಕ್ ಮತ್ತು ಬ್ಲೂ- ಬ್ಲ್ಯಾಕ್ ಎಂಬ ಎರಡು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

* ಅನಾಲಾಗ್ ಇನ್‌ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೆಚ್‌ಎಫ್ 100 ಬೈಕ್ ಕೂಡ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

* 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರ ಹಾಕುತ್ತದೆ. 97.2 ಸಿಸಿ ಏರ್- ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. ಇದು ರೂ.49,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಬಜಾಜ್ :

* ಮ್ಯಾಟ್ ವೈಲ್ಡ್ ಗ್ರೀನ್ ಮತ್ತು ಎಬೊನಿ ಬ್ಲ್ಯಾಕ್- ರೆಡ್ ಸೇರಿದಂತೆ ವಿವಿಧ ಬಣ್ಣಗಳನ್ನು ಹೊಂದಿರುವ ನೂತನ ಬಜಾಜ್ ಸಿಟಿ 110ಎಕ್ಸ್ ಮೋಟಾರ್‌ಸೈಕಲ್‌, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

* ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

* ನೂತನ ಬಜಾಜ್ ಸಿಟಿ 110ಎಕ್ಸ್ ಮೋಟಾರ್‌ಸೈಕಲ್‌, 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.81 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

* 115.45 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿರುವ ಈ ಬೈಕ್ ರೂ. 69,217 ಎಕ್ಸ್ ಶೋರೂಂ ದರವನ್ನು ಪಡೆದಿದೆ.

ಹೋಂಡಾ :

* 8.79 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.30 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ, 109.51 ಸಿಸಿ ಏರ್- ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. ಈ ಬೈಕ್ ಯಾವುದೆಂದರೆ ಹೋಂಡಾ ಸಿಡಿ 110 ಡ್ರೀಮ್ ಬೈಕ್.

* ಎಸಿಜಿ ಸ್ಟಾರ್ಟರ್ ಮೋಟಾರ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಈ ಬೈಕ್, 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

* 9.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಈ ಬೈಕ್ 112 ಕೆಜಿ ತೂಕವಿದ್ದು, ಇದು ರೂ.73,400 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.  (ಎಜೇನ್ಸಿಸ್)

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img