Saturday, July 13, 2024
spot_img
spot_img
spot_img
spot_img
spot_img
spot_img

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳಿಗೆ ಶೀಘ್ರದಲ್ಲೇ ಭರ್ತಿ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧ, ಮೊನ್ನೆ ಮೊನ್ನೆಯಷ್ಟೆ 600 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ಹೇಳಿದ್ದಾರೆ.

ಆದರೆ ಇದೀಗ ಮತ್ತೆ ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರ ಹೇಳಿದ್ದಾರೆ.

ಇದನ್ನು ಓದಿ : Belagavi : ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ನೇರ ನೇಮಕಾತಿ.!

ಈ ಮೂಲಕ ಕರ್ನಾಟಕ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಮತ್ತಷ್ಟು ಗುಡ್‌ ನ್ಯೂಸ್‌ ನೀಡಿದ್ದಾರೆ.

ಕಲಬುರಗಿ ವಿಭಾಗ ಮಟ್ಟದ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಎನ್‌. ಚಲುವರಾಯಸ್ವಾಮಿ, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಹೇಳಿದ್ದಾರೆ.

ಇದನ್ನು ಓದಿ : UCO ಬ್ಯಾಂಕ್ ಅಪ್ರೆಂಟಿಸ್ : 544 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ಹುದ್ದೆಗಳ ವಿವರ :
ಕೃಷಿ ಅಧಿಕಾರಿಗಳು : 42.
ಸಹಾಯಕ ಕೃಷಿ ಅಧಿಕಾರಿಗಳು : 231.
ಈ ಹುದ್ದೆಗಳನ್ನು ಒಳಗೊಂಡಂತೆ ರಾಜ್ಯದಲ್ಲಿ ಒಟ್ಟು 979 ಹುದ್ದೆಗಳನ್ನು ತುಂಬಲಾಗುವುದು.

ಈ ಸಂಬಂಧ ಈಗಾಗಲೇ ಕೆಪಿಎಸ್‌ಸಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

spot_img
spot_img
- Advertisment -spot_img