Friday, September 20, 2024
spot_img
spot_img
spot_img
spot_img
spot_img
spot_img
spot_img

5, 8, 9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ; ಹೈಕೋರ್ಟ್ ಆದೇಶ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಸಾಕಷ್ಟು ವಿರೋಧಗಳ ಮಧ್ಯೆಯೇ  5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Karnataka Department of School Education and Literacy) ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ  ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ)  ಸಂಘಟನೆ  ಕೋರ್ಟ್ (Court) ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಲೋಕಸಭೆ-2024 : ರಾಜ್ಯ ಕಾಂಗ್ರೆಸ್ ಪಕ್ಷದ 15 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್ ಫೈನಲ್.? ಯಾರುಂಟು-ಯಾರಿಲ್ಲಾ.!

ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ   ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ (Board Exam) ನಡೆಸುವ ಚಿಂತನೆ ಮಾಡಲಾಗಿತ್ತು.

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಹಾಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಈ ಹಿಂದೆ ಹೇಳಿದ್ದರು.

ಪಾಕ್ ಪರ ಘೋಷಣೆ ಕೂಗಿದ್ದ ಓರ್ವ ಬಿಜೆಪಿ ಕಾರ್ಯಕರ್ತ ಅರೆಸ್ಟ್.!

ಪ್ರಸ್ತುತ 9ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಹಾಗಿಲ್ಲ.  ಸದ್ಯ ಕರ್ನಾಟಕದಲ್ಲಿ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಎಕ್ಸಾಮ್‌  ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img