Sunday, December 22, 2024
HomeState Newsಬೆಳ್ಳಂಬೆಳಿಗ್ಗೆ ಭೀಕರ ರಸ್ತೆ Accident; ಮೂವರು ಮಹಿಳೆಯರ ಸಾವು.!
spot_img

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ Accident; ಮೂವರು ಮಹಿಳೆಯರ ಸಾವು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ತುಮಕೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ (A private bus lost control of the driver​), ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು, ನಂತರ ಪಲ್ಟಿಯಾದ ಘಟನೆ ಬಸ್ ತುಮಕೂರು (Tumakur) ಜಿಲ್ಲೆಯ ಶಿರಾ (Sira) ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಇದನ್ನು ಓದಿ : ವಕ್ಫ್‌ ಬೋರ್ಡ್‌ನ್ನೇ ವಜಾಗೊಳಿಸಿದ Andhra Pradesh ಸರ್ಕಾರ.!

ಈ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು (Three women) ಸಾವಿಗೀಡಾಗಿದ್ದಾರೆ, 20 ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು (ಡಿ.2) ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ (Goa to Bangalore) ಹೋಗುತ್ತಿದ್ದ ಖಾಸಗಿ ಬಸ್​ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಪಲ್ಟಿಯಾಗಿದೆ (overturned). ಬಸ್​ನಲ್ಲಿ ಒಟ್ಟು 29 ಜನ ಪ್ರಯಾಣಿಕರಿದ್ದರು (There were 29 passengers) ಎನ್ನಲಾಗಿದೆ.

ಇದನ್ನು ಓದಿ : ಕರ್ತವ್ಯನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಮುಖಂಡ Arrest.!

ಸ್ಥಳಕ್ಕೆ ತುಮಕೂರು ಎಸ್ಪಿ ಕೆ ವಿ ಅಶೋಕ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣಾ (Kalambella Police Station) ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

 

ಹಿಂದಿನ ಸುದ್ದಿ : ವಕ್ಫ್‌ ಬೋರ್ಡ್‌ನ್ನೇ ವಜಾಗೊಳಿಸಿದ ಆಂಧ್ರಪ್ರದೇಶ ಸರ್ಕಾರ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಂಧ್ರಪ್ರದೇಶ ಸರ್ಕಾರವು (Government of Andhra Pradesh) ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.

ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ (Government dissolved) ಎಂದು ವರದಿಯಿಂದ ತಿಳಿದು ಬಂದಿದೆ.

ಹಾಲಿ ಸರ್ಕಾರವು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (Department of Minority Welfare) ಹೊರಡಿಸಿದ್ದ ಜಿಒ-47 ರದ್ದುಗೊಳಿಸಿ, ಹೊಸ ಜಿಒ-75 ಹೊರಡಿಸಿದೆ.

ಈ ಕುರಿತು ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್. ಎಂ. ಡಿ. ಫಾರೂಕ್, ಶನಿವಾರ ಈ ಆದೇಶ ಹೊರಡಿಸಲಾಗಿದೆ (Order issued) ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ಸಚಿವ ಎನ್. ಎಂ. ಡಿ. ಫಾರೂಕ್, ಕಳೆದ ವರ್ಷ ಅಕ್ಟೋಬರ್ 21 ರಂದು ಹಿಂದಿನ ಸರ್ಕಾರವು ಮಂಡಳಿಯ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ (Question the nomination) ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ (High Court passed interim orders) ಎಂದು ಸ್ಪಷ್ಟಪಡಿಸಿದರು.

ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಸಿಎಂ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಪ್ರಸ್ತುತ ಸಮ್ಮಿಶ್ರ ಸರ್ಕಾರವು (government) ಹೊಂದಿದೆ ಎಂದು ತಿಳಿಸಿದ್ದಾರೆ.

ವಕ್ಫ್ ಆಸ್ತಿಗಳನ್ನು ರಕ್ಷಿಸಲು ಮತ್ತು ಅದರ ಹೊಸ ನಿರ್ದೇಶನಗಳ ಅಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸುವ ಸಲುವಾಗಿ ಸರ್ಕಾರವು ಬದ್ಧವಾಗಿದೆ. ಹೊಸ ಆದೇಶ ವಕ್ಫ್ ಮಂಡಳಿಯಲ್ಲಿನ ಆಡಳಿತ ನಿರ್ವಾತವನ್ನು ಪರಿಹರಿಸುವ ಉದ್ದೇಶವನ್ನು (Aim to address governance vacuum) ಹೊಂದಿದೆ ಎಂದು ಅವರು ಒತ್ತಿ ಹೇಳಿದರು

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments