Friday, October 18, 2024
spot_img
spot_img
spot_img
spot_img
spot_img
spot_img
spot_img

College ಕಟ್ಟ*ಡದಿಂದ ಹಾ*ರಿ ಆ*ತ್ಮಹ*ತ್ಯೆ ಮಾಡಿಕೊಂಡ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿನಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ತಾನು ಲೈಂಗಿಕ ಕಿರುಕುಳಕ್ಕೊಳಗಾಗಿದ್ದು, ಆ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಬೆದರಿಕೆ ಹಾಕುತ್ತಿದ್ದರು ಎಂದು ಪೋಷಕರಿಗೆ ಸಂದೇಶ ಕಳಿಸಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು (Student) ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ (Visakhapatnam) ನಡೆದಿದೆ.

ಮೃತ ವಿದ್ಯಾರ್ಥಿನಿ ವಿಶಾಖಪಟ್ಟಣಂನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದು, ಆಕೆಯ ಕುಟುಂಬವು ನೆರೆಯ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನೆಲೆಸಿದೆ ಎಂದು ಹೇಳಲಾಗಿದೆ.

ಇದನ್ನು ಓದಿ :

ಮೃತ ಬಾಲಕಿ ಕಳುಹಿಸಿದ್ದ ಸಂದೇಶದಲ್ಲಿ, ತಾನು ಕಾಲೇಜಿನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನನಗೆ ಕಿರುಕುಳ ನೀಡಿದ್ದನ್ನು ಫೋಟೋ ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಸಂಸ್ಥೆಯ ಅಧಿಕಾರಿಗಳು ಹಾಗೂ ಪೊಲೀಸರಿಗೆ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾಳೆ.

ಅಲ್ಲದೇ ಕಾಲೇಜಿನಲ್ಲಿ ಇನ್ನು ಕೆಲ ಸಹ ವಿದ್ಯಾರ್ಥಿನಿಯರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾಳೆ. ಹಾಗಾಗಿ ತನ್ನ ಅಕ್ಕನನ್ನು ಉದ್ದೇಶಿಸಿ, ಕ್ಷಮಿಸಿ ದೀದಿ, ನಾನು ಹೋಗಬೇಕು ಎಂದು ಭಾವುಕವಾಗಿ ಬರೆದಿದ್ದಾಳೆ.

ಶುಕ್ರವಾರ ಮಧ್ಯರಾತ್ರಿ 12:50ರ ಸುಮಾರಿಗೆ ಬಾಲಕಿ ಸಂದೇಶದಲ್ಲಿ, ಟೆನ್ಶನ್ ಆಗಬೇಡಿ, ನನ್ನ ಮಾತು ಕೇಳಿ, ನಾನು ಯಾಕೆ ಹೋಗುತ್ತಿದ್ದೇನೆ ಎಂದು ನಾನು ನಿಮಗೆ ಹೇಳಲಾರೆ. ನಾನು ಹೋದರೂ ನಿಮಗೆ ಅರ್ಥವಾಗುವುದಿಲ್ಲ. ದಯವಿಟ್ಟು ನನ್ನನ್ನು ಮರೆತುಬಿಡಿ, ನನ್ನನ್ನು ಕ್ಷಮಿಸಿ. ಅಮ್ಮ ಮತ್ತು ಅಪ್ಪ, ನೀವು ನನಗೆ ಜನ್ಮ ನೀಡಿ ನನ್ನನ್ನು ಬೆಳೆಸಿದ್ದಕ್ಕಾಗಿ ನಾನು ಕೃತಜ್ಞಳಾಗಿರಬೇಕು, ಆದರೆ ನನ್ನ ಅಧ್ಯಾಯವು ಕೊನೆಗೊಳ್ಳುತ್ತಿದೆ ಎಂದು ಆಕೆ ತೆಲುಗಿನಲ್ಲಿ ಬರೆದಿದ್ದಾಳೆ.

ಇದನ್ನು ಓದಿ :

ತನ್ನ ತಂದೆಯನ್ನೂ ಉದ್ದೇಶಿಸಿ ಸಂದೇಶ ಕಳುಹಿಸಿರುವ ವಿದ್ಯಾರ್ಥಿನಿ, ಲೈಂಗಿಕ ಕಿರುಕುಳಕ್ಕೊಳಗಾದ ಕಾರಣ ನಾನು ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ನನ್ನ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಅದನ್ನಿಟ್ಟುಕೊಂಡು ನನಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಯಾರಿಗೂ ಹೇಳಲು ಸಾಧ್ಯವಿಲ್ಲ. ಇದರಿಂದ ಕಾಲೇಜಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನು ಪೊಲೀಸ್ ದೂರು ದಾಖಲಿಸಿದರೆ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಿದರೆ ಅವರು ನನ್ನ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಸಂದೇಶದಲ್ಲಿ ಹೇಳಿಕೊಂಡಿದ್ದಾಳೆ.

ಕೂಡಲೇ ಕುಟುಂಬಸ್ಥರು ಫೋನ್ ಮೂಲಕ ಬಾಲಕಿಯನ್ನು ಸಂಪರ್ಕಿಸಿ ದುಡುಕದಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ರವಾನಿಸಿದೆ. ಅಷ್ಟರಲ್ಲಾಗಲೇ ಬಾಲಕಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.  (ಎಜೇನ್ಸಿಸ್)

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img