ಜನಸ್ಪಂದನ ನ್ಯೂಸ್, ಹೈದರಾಬಾದ್ : ತೆಲುಗು ನಟ ಅಲ್ಲು ಅರ್ಜುನ್ (Allu Arjun) ಡಿಸೆಂಬರ್ 4 ರಂದು (ಶುಕ್ರವಾರ) ಹೈದರಾಬಾದ್‌ನಲ್ಲಿ ತಮ್ಮ ಚಿತ್ರ ಪುಷ್ಪ 2 ನ ಪ್ರಥಮ ಪ್ರದರ್ಶನದಲ್ಲಿ ಕಾಲ್ತುಳಿತ ಪ್ರಕರಣಕ್ಕೆ (stampede) ಸಂಬಂಧಿಸಿದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಸಂಧ್ಯಾ ಥಿಯೇಟರ್ ದುರಂತ (ಡಿಸೆಂಬರ್ 4 ರಂದು) ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ (arrested by the Chikkadapally police).
ಇದನ್ನು ಓದಿ : KSFES : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಕೆಲ ದಿನಗಳ ಹಿಂದೆ ‘ಪುಷ್ಪ 2’ (Pushpa 2: The Rule) ಸಿನಿಮಾ ಬಿಡುಗಡೆ ವೇಳೆ ಸಂಧ್ಯಾ ಥಿಯೇಟರ್‌ಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗ ತೀವ್ರವಾಗಿ ಗಾಯಗೊಂಡಿದ್ದಾನೆ.
ಈ ಘಟನೆಯಲ್ಲಿ ನಟ ಅಲ್ಲು ಅರ್ಜುನ್ ಹಾಗೂ ಇತರರ ವಿರುದ್ಧ ದೂರು (complaint) ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಅಂಗರಕ್ಷಕ ಹಾಗೂ ಇತರರನ್ನು ಪೊಲೀಸರು ವಶಕ್ಕೆ (into custody) ಪಡೆದಿದ್ದಾರೆ.
ಇದನ್ನು ಓದಿ : ಅಳುವಾಗ ಮೂಗು ಸೋರುತ್ತದೆ ಏಕೆ ಗೊತ್ತಾ.? ಇಲ್ಲಿದೆ ಅಚ್ಚರಿಯ ಮಾಹಿತಿ.!
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಚಿಕ್ಕಡಪಲ್ಲಿ ಪೊಲೀಸರು ಈ ಹಿಂದೆ ನೋಟಿಸ್ ನೀಡಿದ್ದರು. ಆದರೆ ನೋಟಿಸ್‌ಗೆ ಅಲ್ಲು ಅರ್ಜುನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. ಆದರೆ, ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನಲ್ಲಿ (Telangana High Court) ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ.
View this post on Instagram