ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನ ನ್ಯಾಯಾಲಯವು (Mangalore Court) ಬಾಲ್ಯ ವಿವಾಹ (Child marriage) ನಿಷೇಧ ಕಾಯ್ದೆಯಡಿ ಅಪರಾಧ ಎಸಗಿದವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು (judgment) ನೀಡಿದೆ ಎಂದು ತಿಳಿದು ಬಂದಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾದ ಉಳ್ಳಾಲ ಮಂಜನಾಡಿ ಮೊಂಟೆಪದವಿನ ಇಮ್ತಿಯಾಝ್ (29), ಮಾವ ಕೆ.ಐ.ಮುಹಮ್ಮದ್ ಹಾಗೂ ಅತ್ತೆ ಮೈಮುನಾ, ಬಾಲಕಿಯ ತಂದೆ ಅಬ್ದುಲ್ ಖಾದರ್, ತಾಯಿ ರಮ್ಲತ್ ಶಿಕ್ಷೆಗೊಳಗಾಗಿದ್ದಾರೆ.
ಇದನ್ನು ಓದಿ : Video : ಮೆಟ್ರೋ ನಿಲ್ದಾಣದಲ್ಲಿ ಲಿಪ್ ಟು ಲಿಪ್ ಕಿಸ್ ಮಾಡುತ್ತ ನಿಂತ ಜೊಡಿ ; ಸಾರ್ವಜನಿಕರು ಶಾಕ್.!
2023ರ ಮೇ ತಿಂಗಳಿನಲ್ಲಿ 17 ವರ್ಷದ ಬಾಲಕಿಯ ಮದುವೆಯಾಗಿತ್ತು. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಪೂರ್ಣಗೊಳಿಸಿದ ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ. ಅವರು ಪೊಕ್ಸೊ ಕಾಯ್ದೆಯ ಕಲಂ 6 ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಕಲಂ 9, 10 ಮತ್ತು 11ರಂತೆ ದೋಷಾರೋಪಣಾ ಪತ್ರ (charge sheet) ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯವು (POCSO Special Court) ಅಭಿಯೋಜನೆ ಪರ ಒಟ್ಟು 10 ಸಾಕ್ಷಿದಾರರನ್ನು ವಿಚಾರಿಸಿ 22 ದಾಖಲೆಗಳನ್ನು ಗುರುತಿಸಲಾಗಿತ್ತು.
ಇದನ್ನು ಓದಿ : Prostitution : ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಐವರು ಮಹಿಳೆಯರ ರಕ್ಷಣೆ.!
ನ್ಯಾಯಾಧೀಶ ಮಾನು ಕೆ. ಎಸ್. ಅವರು ಪ್ರಕರಣದ ವಾದ ಪ್ರತಿವಾದವನ್ನು (Argument counterargument) ಆಲಿಸಿ, ಮೂವರು ಆರೋಪಿಗಳ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕಲಂ 10 ಮತ್ತು 11ರಡಿ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ತಲಾ ಐದು ಸಾವಿರ ರೂ. ದಂಡ, ಆರೋಪಿ ಇಮ್ತಿಯಾಝ್ ಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಲಂ 9ರಡಿ 1 ವರ್ಷಗಳ ಕಠಿಣ ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿದೆ.
ಹಿಂದಿನ ಸುದ್ದಿ : ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಐವರು ಮಹಿಳೆಯರ ರಕ್ಷಣೆ.!
ಜನಸ್ಪಂದನ ನ್ಯೂಸ್, ಮೈಸೂರು : ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ ಘಟನೆ ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ (Hebbalu Police Station) ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ನಡೆದಿದೆ.
ಇದನ್ನು ಓದಿ : ಬಿಸಿ ನೀರಿಗಾಗಿ ವ್ಯಕ್ತಿಯ ಹೊಸ ಟ್ರಿಕ್ ; Video ನೊಡಿದ್ರೆ ಬಿದ್ದು ಬಿದ್ದು ನಗುತ್ತಿರಾ.!
ಇನ್ನೂ ಈ ಐವರು ಮಹಿಳೆಯರು ಮೈಸೂರು, ಹಾಸನ, ಕೆ.ಆರ್ ನಗರ (Mysore, Hassan, K. R. Nagar) ಮೂಲದವರಾಗಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ.
ಒಡನಾಡಿ ಸಂಸ್ಥೆ ಮುಖ್ಯಸ್ಥ (Head of the organization) ಸ್ಟ್ಯಾನ್ಲಿ ಪರುಶು ಅವರು ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ತಾಕತ್ತಿದ್ದರೆ ನಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಶಾಸಕರು, ಸಚಿವರನ್ನು ವಜಾ ಮಾಡಿ ; ಸ್ವಾಮೀಜಿ.!
ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಮಹಿಳೆ ಮತ್ತು ಓರ್ವ ಗ್ರಾಹಕನನ್ನು ಅರೆಸ್ಟ್ ಮಾಡಲಾಗಿದೆ.
ಹೆಬ್ಬಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.