ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೊಲೀಸರು ಬಿಜೆಪಿ ಎಂ.ಎಲ್.ಸಿ ಸಿ.ಟಿ.ರವಿ ಅವರನ್ನು ಅರೆಸ್ಟ್ (Arrest) ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Laxmi Hebbalakar) ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ.
ಇದನ್ನು ಓದಿ : Video : 41 ಸೆಕೆಂಡುಗಳಲ್ಲಿ 31 ಸಲ ಕಪಾಳಮೋಕ್ಷ ಮಾಡಿದ ಪೊಲೀಸ್ ಅಧಿಕಾರಿ ಸಸ್ಪೆಂಡ್.!
ಹಿರೇಬಾಗೇವಾಡಿ ಪೊಲಿಸ್ ಠಾಣೆಯಲ್ಲಿ ಸಿ. ಟಿ. ರವಿ ವಿರುದ್ಧ ಎಫ್.ಐ.ಆರ್ (FIR) ದಾಖಲಾಗಿದೆ.
ಬಿಎನ್ ಎಸ್ ಕಾಯ್ದೆ 75 ಹಾಗೂ 79ರ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು (Hirebagawadi police) ಬೆಳಗಾವಿ ಸುವರ್ಣಸೌಧದಲ್ಲಿ ಸಿ. ಟಿ. ರವಿ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಖಾನಾಪೂರ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದರು.
ಇದನ್ನು ಓದಿ : Health : ಈ ಹಣ್ಣಿನಲ್ಲಿದೆ ಮಧುಮೇಹ, ಕ್ಯಾನ್ಸರ್ ತಡೆಯುವ ಶಕ್ತಿ ; ಬೆಳಿಗ್ಗೆ ತಿಂದ್ರೆ ಆರೋಗ್ಯದಲ್ಲಿ ಚಮತ್ಕಾರ.!
ಬಂಧನಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಂತೆ ಪೊಲೀಸರು ಸಿ. ಟಿ. ರವಿ ಅವರನ್ನು ಹೊತ್ತುಕೊಂಡು ಹೋಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂಬ ಮಾಹಿತಿ (information) ಲಭ್ಯವಾಗಿದೆ.