ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ UPSCಯು ಒಂದಾಗಿದೆ (UPSC is one of the toughest exams in India). ಕೆಲ ಅಭ್ಯರ್ಥಿಗಳು ಛಲ ಬಿಡದೆ, ತಮ್ಮ ಕಠಿಣ ಪರಿಶ್ರಮದಿಂದ (hard work) ಯುಪಿಎಸ್‌ಸಿ ಪರೀಕ್ಷೆಯಲ್ಲಿ ಪಾಸ್ ಆಗುವುದರ ಮೂಲಕ ತಮ್ಮ ಗುರಿಯನ್ನು ಸಾಧಿಸುತ್ತಾರೆ.
ಅದೇ ರೀತಿ ನಾವಿಂದು ಐಎಎಸ್ ಸ್ವಧಾ ದೇವ್ ಸಿಂಗ್ (Swadha Dev Singh) ಅವರ ಯಶಸ್ಸಿನ ಕಥೆ ಹೇಳಲಿದ್ದೇವೆ. ಇವರು 2014 ರಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವ (Cleared the IAS exam in the first attempt) ಮೂಲಕ ಅಸಾಧಾರಣ ಸಾಧನೆ ತೋರಿದ್ದಾರೆ.
ಇದನ್ನು ಓದಿ : Video : ಸುಂದರ ಮಹಿಳೆಯನ್ನು ನೋಡಿ ದಂಡ ಹಾಕದೇ ಬಿಟ್ಟು ಕಳುಹಿಸಿದ್ರಾ ಪೊಲೀಸರು.?
ವಾರಣಾಸಿ (Varanasi) ಮೂಲದ ಸ್ವಧಾ ಅವರು ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು. ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್, ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದರು (Graduated from Delhi University).
ಸ್ವಾಧಾ ಅವರು ಶಿಕ್ಷಣದಲ್ಲಿ ಪ್ರತಿಭಾನ್ವಿತೆಯಾಗಿದ್ದು (talented), UPSC ಪರೀಕ್ಷೆಯಲ್ಲಿ 66ನೇ ಅಖಿಲ ಭಾರತ ರ್ಯಾಂಕ್ ಕೂಡ ಪಡೆದರು.
ಇದನ್ನು ಓದಿ : C. T. ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ: ಸಭಾಪತಿ ಹೊರಟ್ಟಿ ಸ್ಪೋಟಕ ಹೇಳಿಕೆ.!
ಸದ್ಯ, IAS ಅಧಿಕಾರಿಯಾಗಿರುವ ಸ್ವಧಾ ದೇವ್ ಸಿಂಗ್ ಅವರು ಪ್ರಸ್ತುತ ಒಡಿಶಾದ ಪಂಚಾಯತ್ ರಾಜ್ ಮತ್ತು ಕುಡಿಯುವ ನೀರು ಇಲಾಖೆಯಲ್ಲಿ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಅವರು ಈ ಹಿಂದೆ ನಯಾಗರ್ ಜಿಲ್ಲೆಯ ಕಲೆಕ್ಟರ್ (Collector of Nagar District) ಆಗಿದ್ದರು.
ಅವರ ಪತಿ ಸಮರ್ಥ್ ವರ್ಮಾ, ಅವರು ಐಎಎಸ್ ಅಧಿಕಾರಿಯಾಗಿದ್ದಾರೆ ಮತ್ತು ಒಡಿಶಾದ ಪುರಿಯಲ್ಲಿ (Puri on Odisha) ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಹಿಂದಿನ ಸುದ್ದಿ : ನಾಲ್ಕು ಲಕ್ಷ ರೂ. ಲಂಚ ಪಡೆಯುತ್ತಿದ್ದ Revenue Inspector ಲೋಕಾಯುಕ್ತ ಬಲೆಗೆ.!
ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ (Mulki of Dakshina Kannada district) ಕಂದಾಯ ನಿರೀಕ್ಷಕರೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಗುರುವಾರ (ಡಿ.19) ನಡೆದಿದೆ.
ಮುಲ್ಕಿಯ ಕಂದಾಯ ನಿರೀಕ್ಷಕ (Inspector of Revenue) ಜಿ.ಎಸ್ ದಿನೇಶ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನು ಓದಿ : Health : ಈ ಹಣ್ಣಿನಲ್ಲಿದೆ ಮಧುಮೇಹ, ಕ್ಯಾನ್ಸರ್ ತಡೆಯುವ ಶಕ್ತಿ ; ಬೆಳಿಗ್ಗೆ ತಿಂದ್ರೆ ಆರೋಗ್ಯದಲ್ಲಿ ಚಮತ್ಕಾರ.!
ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರಿಸಲು (To include names of heirs in Pahani) ಮಾಡಲು 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.
ಈ ಕುರಿತು ದೂರುದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನಲೆ ಡಿ.19ರ ಗುರುವಾರ ಸುರತ್ಕಲ್ ಜಂಕ್ಷನ್ ಬಳಿ ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನು ಓದಿ : ವೃದ್ದರನ್ನು ಬಹಳ ಹೊತ್ತು ಕಾಯಿಸಿದ ಅಧಿಕಾರಿಗಳಿಗೆ ನಿಂತು ಕೆಲಸ ಮಾಡುವ ಶಿಕ್ಷೆ ನೀಡಿದ IAS ಆಫೀಸರ್.!
ಈ ವೇಳೆ ಕಂದಾಯ ನಿರೀಕ್ಷಕ ದಿನೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ತಂಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ (Mangalore Divisional Superintendent of Police) ಎಂ.ಎ ನಟರಾಜ ಅವರ ಮಾರ್ಗದರ್ಶನದಲ್ಲಿ (Guidance) ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ. ಎ., ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದರು ಎಂದು ತಿಳಿದು ಬಂದಿದೆ.