Sunday, September 8, 2024
spot_img
spot_img
spot_img
spot_img
spot_img
spot_img
spot_img

Breaking News : ಏ.10 ಕ್ಕೆ ದ್ವಿತೀಯ PUC ಫಲಿತಾಂಶ.?

spot_img
WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಬೇಗನೆ ಪ್ರಕಟವಾಗುವ ಸಾಧ್ಯತೆ ಇದೆ.

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

Health : ಲಿವರ್ ಕ್ಲೀನ್ ಮಾಡುವ ಆಹಾರ ಪದಾರ್ಥಗಳು ಯಾವುವು ಗೊತ್ತಾ.?

ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

2024–25ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಿ, ಫಲಿತಾಂಶ ನೀಡಬೇಕಿದೆ. ಹಾಗಾಗಿ, ಆಯಾ ವಿಷಯಗಳ ಪರೀಕ್ಷೆ ಮುಕ್ತಾಯವಾದ ತಕ್ಷಣವೇ ಮೌಲ್ಯಮಾಪನ ಕಾರ್ಯ ಆರಂಭಿಸಲಾಗಿತ್ತು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಎಪ್ರಿಲ್ 3 ಕೊನೆಯ ದಿನಾಂಕ ; ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

ಸರ್ಕಾರಿ, ಅನುದಾನಿತ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳ 40 ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬೆಂಗಳೂರು ಕೇಂದ್ರಗಳಲ್ಲಿ ನಡೆಯುತ್ತಿರುವ ವಿಜ್ಞಾನ ವಿಷಯಗಳ ಮೌಲ್ಯಮಾಪನ ಏ.5ರ ಒಳಗೆ ಪೂರ್ಣಗೊಳ್ಳಲಿದೆ.

 ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img