ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್ಸ್ಟೇಬಲ್ ಓರ್ವ ಆತ್ಮಹತ್ಯೆಯ (attempt to suicide) ನಾಟಕವಾಡಿದ ವಿಚಿತ್ರ ಘಟನೆ ಬುಧವಾರ ರಾತ್ರಿ ನಡೆದಿದೆ.
ಪೊಲೀಸ್ ಕಾನ್ಸ್ಟೇಬಲ್ ಮುದಕಪ್ಪ ಉದಗಟ್ಟಿ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಮುದಕಪ್ಪ ಎರಡು ದಿನಗಳ ಕಾಲ ರಜೆ ಮೇಲೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಅಲ್ಲದೇ ಕರ್ತವ್ಯ ನಿಯೋಜಿಸಿದ ಜಾಗಕ್ಕೆ (to the place of duty assigned) ಹೋಗಬೇಕೆಂದು ಸೂಚಿಸಿದ್ದರು. ಆದರೆ ಇದಕ್ಕೊಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆ (I will consume poison) ಎಂದು ಹೇಳಿದ್ದಾರೆ. ಅಲ್ಲದೇ ದಾಳಿಯಲ್ಲಿ ಬಿದ್ದು ಹೊರಳಾಡಿದ್ದಾರೆ ಎನ್ನಲಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ತಪಾಸಣೆ (Health Checkup) ನಡೆಸಲಾಗಿದೆ. ಇನ್ನೂ ವೈದ್ಯರು ಪರೀಕ್ಷೆ ನಡೆಸಿ, ಮುದಕಪ್ಪ ವಿಷ ಕುಡಿದಿಲ್ಲ ಎಂದು ದೃಢಪಡಿಸಿದ್ದಾರೆ. ಬಳಿಕ ಮೇಲಾಧಿಕಾರಿಗಳು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.
ಈ ಬೆಳವಣಿಗೆ ಮಧ್ಯೆ ಪಿಐ ಡಿಕೆ ಪಾಟೀಲ್ ಅವರು ಅಸ್ವಸ್ಥಗೊಂಡಿದ್ದಾರೆ (ill). ಅವರಿಗೆ ಲೋ ಬಿಪಿ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ವಿಚಾರ ತಿಳಿದು ಎಸಿಪಿ ಶೇಖರಪ್ಪ ಉದ್ಯಮಬಾಗ ಠಾಣೆಗೆ ಆಗಮಿಸಿ, ಘಟನೆಯ ಸಂಪೂರ್ಣ ಮಾಹಿತಿ (Complete information) ಪಡೆದರು. ಬಳಿಕ ಬೆಳಗಾವಿ ಪೊಲೀಸ್ ಕಮಿಷನರ್ ಅವರಿಗೂ ವಿವರಗಳನ್ನು ತಿಳಿಸಿದರು ಎಂದು ತಿಳಿದು ಬಂದಿದೆ.