ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಸದಾಶಿವ ನಗರದ (Sadashiva Nagar, Bangalore) ಆರ್. ಎಂ. ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ದಂಪತಿ ತಮ್ಮಿಬ್ಬರು ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾವು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಸಾವಿಗೀಡಾದವರು ಅನೂಪ್ (38), ಪತ್ನಿ ರಾಖಿ (35), ಮಕ್ಕಳಾದ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಕರ್ನಾಟಕಕ್ಕೂ ಕಾಲಿಟ್ಟ `HMPV’ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ.!
ಉತ್ತರ ಪ್ರದೇಶ (Uttar Pradesh) ಮೂಲದವರಾದ ಅನೂಪ್, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ (Software consultant in a private company) ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ನಿಖರ ಕಾರಣ (exact reason) ತಿಳಿದು ಬಂದಿಲ್ಲ. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಇದರ ಜೊತೆಗೆ ಮೊದಲ ಮಗುವಿಗೆ ಮಾನಸಿಕ ತೊಂದರೆ (mental trouble) ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.
ಇದನ್ನು ಓದಿ : ವಿಲ್ ಬರೆದು Register ಮಾಡಿದ್ರೆ ಸಾಲದು ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
ಇನ್ನೂ ಅನೂಪ್ ಮನೆಯಲ್ಲಿ ಮೂರು ಜನ ಕೆಲಸಗಾರರಿದ್ದರು. ಇಬ್ಬರು ಕೆಲಸಗಾರರು ಅಡುಗೆ ಕೆಲಸಕ್ಕೆಂದು, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ (salary) ನೀಡುತ್ತಿದ್ದ ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು ಎಂದು ತಿಳಿದು ಬಂದಿದೆ.
ಇನ್ನೂ ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ನೀವು ಬೇಗ ಕೆಲಸಕ್ಕೆ ಬನ್ನಿ ಎಂದು ಅನೂಪ್ ಕೆಲಸದವರಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಸಂತೋಷವಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.
ಹಿಂದಿನ ಸುದ್ದಿ : ಎಚ್ಚರಿಕೆ : ಕರ್ನಾಟಕಕ್ಕೂ ಕಾಲಿಟ್ಟ ‘HMPV’ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ.!
ಜನಸ್ಪಂದನ ನ್ಯೂಸ್, ಬೆಂಗಳೂರು : ಕೊರೊನಾ ಬಳಿಕ ಎಚ್ಎಂಪಿವಿ (HMPV) ವೈರಸ್ ಜನರನ್ನು ಭಯಭೀತರನ್ನಾಗಿ ಮಾಡುತ್ತಿದೆ. ಸದ್ಯ ಬೆಂಗಳೂರಿನಲ್ಲಿ (Bangalore) 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ (HMPV) ವೈರಸ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ (Virus detected). ಆದರೆ, ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
Read it : ಅಪಘಾತಕ್ಕೀಡಾದ Truck ಚಾಲಕನಿಗೆ ಜನರು ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!
ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬಸ್ಥರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ (Child and family members have no travel history). ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
HMPV ವೈರಸ್ ಎಂದರೇನು.?
ಚೀನಿಯರನ್ನು ಆತಂಕಕ್ಕೆ ದೂಡಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (Human Meta Pneumo Virus) ಅಥವಾ ಎಚ್ಎಂಪಿವಿ ಹೊಸದೇನಲ್ಲ. 2001 ರಲ್ಲಿ ಇದನ್ನು ಮೊದಲು ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ ಎಂದು ವರದಿಯಾಗಿದೆ.
Read it : District ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಈ ವೈರಸ್‌ನ ಲಕ್ಷಣಗಳು :
* ಜ್ವರ.
* ಕೆಮ್ಮು
* ಮೂಗು ಕಟ್ಟುವುದು.
* ಶ್ವಾಸಕೋಶದ ಸೋಂಕು.
* ಉಸಿರಾಟದ ತೊಂದರೆ.
* ನ್ಯುಮೋನಿಯಾ.
ವೈರಲ್ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಚಳಿಗಾಲದಲ್ಲಿ ಕಂಡುಬರುತ್ತವೆ (Symptoms of viral fever usually appear in winter). ಸೋಂಕಿನ 3- 6 ದಿನಗಳ ಬಳಿಕ ರೋಗ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಇದು ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಿಳಿದು ಬಂದಿದೆ.
Read it : ನಡುರಸ್ತೆಯಲ್ಲೇ ಮೈಮರೆತ ಜೋಡಿ : ಪೊಲೀಸ್ ಎಂಟ್ರಿ ; ವಿಡಿಯೋ Viral.!
ಒಟ್ಟಿನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲಿ ಗೋಚರಿಸುತ್ತಿವೆ. ಈ ವೈರಸ್ ಬಗ್ಗೆ ಚೀನಾ ಸರ್ಕಾರ ಅಥವಾ ವಿಶ್ವ ಆರೋಗ್ಯ ಸಂಸ್ಥೆ (Chinese government or the World Health Organization) ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
ಇನ್ನೂ HMPV ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಈ ವೈರಸ್ ಬಗ್ಗೆ ನಮ್ಮ ದೇಶದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Union Ministry of Health) ಕೂಡ ಹೇಳಿದೆ.