Wednesday, February 5, 2025
HomeNewsಭೀಕರ Road ಅಪಘಾತ ; ಐವರ ಸಾವು.!
spot_img
spot_img
spot_img
spot_img

ಭೀಕರ Road ಅಪಘಾತ ; ಐವರ ಸಾವು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಕೋಲಾರ : ಭೀಕರ ರಸ್ತೆ ಅಪಘಾತ (A terrible road accident) ಸಂಭವಿಸಿ ಕೋಲಾರ (Kolar) ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತಮಿಳುನಾಡಿನ ರಾಣಿಪೇಟೆ ಸಮೀಪ (Near Ranipet, Tamil Nadu) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಈ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ.

ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!

ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಸಾವನ್ನಪ್ಪಿದ್ದು, ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ತೆರಳುತ್ತಿತ್ತು. ಇನ್ನೂ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸಕ್ಕೆಂದು (Trip to Om Shakti Temple), ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಜನ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತೆರಳಿ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇದನ್ನು ಓದಿ : Video : ಗಾಳಿಪಟ ಹಾರಿಸುತ್ತಿರುವ ಮಂಗ : “ಇದು ಭಾರತದಲ್ಲಿ ಮಾತ್ರ ಸಾಧ್ಯ” ಎಂದ ನೆಟ್ಟಿಗರು.!

ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಾಣಿಪೇಟೆ ಪೊಲೀಸ್ ಠಾಣೆಯ (Ranipete Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!