ಜನಸ್ಪಂದನ ನ್ಯೂಸ್, ಡೆಸ್ಕ್ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾದ (Bandra, Mumbai) ಮನೆಗೆ ದರೋಡೆಕೋರರು ನುಗ್ಗಿ ನಟನ ಮೇಲೆ 6 ಬಾರಿ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದ ವೇಳೆ ದರೋಡೆಕೋರನೊಬ್ಬ ಮನೆಗೆ ನುಗ್ಗಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಿಂದ ತಿಳಿದುಬಂದಿದೆ.
ಇದನ್ನು ಓದಿ : ಸಿಎಂ ಸಿದ್ದು ಹೆಸರಿನಲ್ಲಿ Free Recharge ಅಂತಾ ಲಿಂಕ್ ಬಂತಾ ; ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ.!
ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಅವರಿಗೆ ಆರು ಕಡೆ ಗಾಯಗಳಾಗಿದ್ದು, ಅವುಗಳಲ್ಲಿ ಎರಡು ಆಳವಾಗಿವೆ. ಒಂದು ಗಾಯ ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ ಎಂದು ಲೀಲಾವತಿ ಆಸ್ಪತ್ರೆಯ ಸಿಒಒ ಡಾ. ನೀರಜ್ ಉತ್ತಮಣಿ ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.