ಜನಸ್ಪಂದನ ನ್ಯೂಸ್, ಡೆಸ್ಕ್ : ಮೇಳದಲ್ಲಿ ಮೌನಿ ಅಮಾವಾಸ್ಯೆ (Mouni Amavasya) ಹಿನ್ನಲೆಯಲ್ಲಿ ಅಮೃತ ಸ್ನಾನ ಮಾಡಲು 10 ಕೋಟಿಗೂ ಹೆಚ್ಚು ಭಕ್ತರು ಮಹಾಕುಂಭ (Mahakummbha) ಮೇಳದಲ್ಲಿ ಸೇರಿದ್ದಾರೆ.
ಪ್ರಯಾಗ್‌ರಾಜ್‌ನ (Prayagraj) ಮಹಾಕುಂಭ ಮೇಳದಲ್ಲಿ ಮಂಗಳವಾರ ಮಧ್ಯರಾತ್ರಿ (ಬುಧವಾರ ಬೆಳಗ್ಗೆ) ಸುಮಾರು 2 ಗಂಟೆಗೆ ಅವಘಡ ಸಂಭವಿಸಿದೆ.
ಇದನ್ನು ಓದಿ : ಕುಂಭಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ ; Vedio ವೈರಲ್.!
ಭಕ್ತರ ಸಂಖ್ಯೆ ಹೆಚ್ಚಾದ ಪರಿಣಾಮ ತಡೆಗೋಡೆಗಳನ್ನು ದಾಟಿ ಅಮೃತಸ್ನಾನ (Amritsanam) ಕ್ಕೆ ಭಕ್ತಾಧಿಗಳು ತೆರಳುತ್ತಿರುವ ಕಾರಣ ನೂಕು ನುಗ್ಗಲಿಗೆ ಕಾರಣವಾಗಿದೆ.
ನೂಕು ನುಗ್ಗಲು ಉಂಟಾದ ಕಾರಣ ಹಲವು ಭಕ್ತರು ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿರುವುದಾಗಿ (10 devotees died) ವರದಿಯಾಗಿದೆ. ಆದರೆ ಸ್ಥಳದಲ್ಲಿರುವ ಮೂಲಗಳ ಮಾಹಿತಿಗಳ ಪ್ರಕಾರ ಯಾವುದೇ ಭಕ್ತರು ಮೃತಪಟ್ಟಿಲ್ಲ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : Airport ನಲ್ಲಿ ವಿಮಾನಕ್ಕೆ ಬಡಿದ ಮಿಂಚು ; ಆಘಾತಕಾರಿ ವಿಡಿಯೋ ವೈರಲ್.!
ನುಕು ನುಗ್ಗಲಿನಲ್ಲಿ ಗಾಯಗೊಂಡ ಭಕ್ತಾಧಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ (Admitted to hospital) ಚಿಕಿತ್ಸೆ ನೀಡಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ.
ಘಟನೆಯ ಬೆನ್ನಲ್ಲೇ PM ನರೇಂದ್ರ ಮೋದಿ, ಯುಪಿ CM ಯೋಗಿ ಆದಿತ್ಯನಾಥ್ ಜೊತೆ ಮಾತನಾಡಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಪರಿಸ್ಥಿತಿಯನ್ನು ಪ್ರಧಾನಿ ನಿರಂತರವಾಗಿ ಗಮನಿಸುತ್ತಿದ್ದಾರೆ.
ಅನೇಕರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ, ಜನರು ಪ್ರಜ್ಞೆ ತಪ್ಪಿದರು (lost consciousness). ಅಂತಹ ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 40ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು.
ಇದನ್ನು ಓದಿ : RBIನಿಂದ 350ರ ಹೊಸ ನೋಟು ಬಿಡುಗಡೆ.? ಇಲ್ಲಿದೆ ನಿಜಾಂಶ.!
ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನ ರದ್ದು :
ನೂಕು ನುಗ್ಗಲು ಉಂಟಾದ ಪರಿಣಾಮ ಎಲ್ಲಾ 13 ಅಖಾಡಗಳು ಸಾಧು – ಸಂತರ ಶಾಹಿ ಸ್ನಾನವನ್ನು ರದ್ದುಗೊಳಿಸಿದ್ದಾರೆ (canceled the royal bath of the sadhus) ಮುಂದಿನ ಅಮೃತ ಸ್ನಾನ ಬಸಂತ್ ಪಂಚಮಿಯಂದು ನಡೆಯಲಿದೆ.
ಜನಸಂದಣಿಯನ್ನು ನಿಯಂತ್ರಿಸಲು ಎಲ್ಲಾ 30 ಪ್ಲಟೂನ್ ಸೇತುವೆ (Platoon bridges) ಗಳನ್ನು ತೆರೆಯಲಾಗಿದೆ. ಪ್ರಯಾಗ್‌ರಾಜ್‌ಗೆ ಕುಂಭ ಮೇಳಕ್ಕೆ ಹೋಗುವವರ ಪ್ರವೇಶವನ್ನು ನಿಲ್ಲಿಸಲಾಗಿದೆ. ರಸ್ತೆಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.