ಜನಸ್ಪಂದನ ನ್ಯೂಸ್, ಮೈಸೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿಶ್ವೇಶ್ವರಯ್ಯ ನಗರದ (Visvesvaraya Nagar, Mysore) ಅಪಾರ್ಟ್ಮೆಂಟ್ ವೊಂದರಲ್ಲಿ ನಡೆದಿದೆ.
ಸಾವನ್ನಪ್ಪಿದವರು ಪ್ರಿಯಂವಧಾ (62), ಚೇತನ್ (45), ರೂಪಾಲಿ (43) ಮತ್ತು ಕುಶಾಲ್ (15) ಎಂದು ತಿಳಿದು ಬಂದಿದೆ.
ಇದನ್ನು ಓದಿ : BSNL Offers : ಪೂರ್ತಿ 425 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು 850GB ಡೇಟಾದ ಮಸ್ತ್ ರಿಚಾರ್ಜ್ ಪ್ಲಾನ್.!
ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ (poison) ಸಾಯಿಸಿದ್ದು, ಬಳಿಕ ತಾನು ನೇಣಿಗೆ ಕೊರಳೊಡ್ಡಿ (hanging) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ (Police Commissioner Seema Latkar), DCP ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ತರಗತಿಯಲ್ಲೇ ಶಿಕ್ಷಕಿಯರ ಮುಂದೆ ವಿದ್ಯಾರ್ಥಿಗಳಿಂದ ಬಿಯರ್ ಬಾಟಲ್ ಹಿಡಿದು Birthday Party ; ವಿಡಿಯೋ.!
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.