ಜನಸ್ಪಂದನ ನ್ಯೂಸ್, ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ (Sakleshpur of Hassan district) ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯಲ್ಲಿ ವ್ಯಕ್ತಿಯೋರ್ವ ಹೆಂಡತಿಯ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ನಡೆದಿದೆ.
ಮಹಿಳೆಯ ಪತಿ ಈ ಕೃತ್ಯ ಎಸಗಿ ಸ್ಥಳದಿಂದ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – D ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ (ದಿ.22) ಕೊನೆಯ ದಿನ.!
ಮೃತ ಮಹಿಳೆ ಮಂಜುಳಾ ಎಂದು ತಿಳಿದು ಬಂದಿದೆ. ಕಳೆದ ಕೆಲ ತಿಂಗಳಿಂದ ಆರೋಪಿಯು ಪತ್ನಿಯ ಶೀಲ ಶಂಕಿಸುತ್ತಿದ್ದ. ಅಲ್ಲದೇ ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು (A fight between the two) ಎನ್ನಲಾಗಿದೆ.
ಪತ್ನಿಯ ಮೇಲಿನ ಅನುಮಾನದಿಂದ (Suspicion of wife) ಪತಿ ಯೋಗೇಶ್ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಮನೆಯ ಬಾಗಿಲು ಬೀಗ ಹಾಕಿ ಯಾರಿಗೂ ಗೊತ್ತಾಗದಂತೆ ಊರು ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿಂದಿನ ಸುದ್ದಿ : ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಪೊಲೀಸ್ ಅಧಿಕಾರಿ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ಜನಸ್ಪಂದನ ನ್ಯೂಸ್, ಬೆಂಗಳೂರು : ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಅಸಭ್ಯವಾಗಿ ವರ್ತಿಸುತ್ತಿರುವ ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ (ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆ) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇನ್ನೂ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗಿದ್ದು, ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಇದನ್ನು ಓದಿ : ಗಂಗಾ ಕಲ್ಯಾಣ ಯೋಜನೆ : ಬೋರ್’ವೆಲ್ ಕೊರೆಸಲು 3.5 ಲಕ್ಷ ರೂ. ಸಬ್ಸಿಡಿಗಾಗಿ ಅರ್ಜಿ ಆಹ್ವಾನ.!
ಮೈ ಮೇಲೆ ಅರಿವು ಇಲ್ಲದಂತೆ ಕುಡಿದಿದ್ದ ಪೊಲೀಸ್ ಅಧಿಕಾರಿಯು ಮಹಿಳೆಯೊಬ್ಬರ ಖಾಸಗಿ ಅಂಗಗಳನ್ನು ಸ್ಪರ್ಶಿಸುತ್ತ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (The police officer was rude by touching the woman’s private parts) ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.
ಆಕೆ ಆಕ್ಷೇಪ ವ್ಯಕ್ತಪಡಿಸಿದರೂ ಸುಮ್ಮನಾಗದ ಅಧಿಕಾರಿಯು ಮತ್ತಷ್ಟು ಕಿರುಕುಳ (harass) ನೀಡುತ್ತಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು.
ಇದನ್ನು ಓದಿ : ಪರಸ್ತ್ರೀಯೊಂದಿಗೆ ಪತಿ ಲವ್ವಿಡವ್ವಿಗೆ ಬೇಸತ್ತು ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ.!
ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಪೊಲೀಸರನ್ನು ಕೇವಲ ಅಮಾನತು ಮಾಡಿದರೆ ಸಾಲದು, ಮತ್ತೆ ಬೇರೆ ಕಡೆ ವರ್ಗಾವಣೆಗೊಂಡು ತಮ್ಮ ಅಶ್ಲೀಲ ವರ್ತನೆಯನ್ನು ಮುಂದುವರಿಸುತ್ತಾರೆ.
ಉನ್ನತ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಯೇ ಹೀಗೆ ನಡೆದುಕೊಂಡರೆ ಇನ್ನೂ ಆರೋಪಿಗಳ ಕಥೆಯೇನು ಎಂದು ಕಿಡಿಕಾರಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ :