Wednesday, March 12, 2025
HomeNewsಭೀಕರ ರಸ್ತೆ ಅಪಘಾತ : ಕುಂಭಮೇಳಕ್ಕೆ ತೆರಳಿದ್ದ Gokak ಮೂಲದ 6 ಜನರ ಸಾ*.!
spot_img
spot_img
spot_img
spot_img
spot_img

ಭೀಕರ ರಸ್ತೆ ಅಪಘಾತ : ಕುಂಭಮೇಳಕ್ಕೆ ತೆರಳಿದ್ದ Gokak ಮೂಲದ 6 ಜನರ ಸಾ*.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಗೋಕಾಕ : ಬೆಳಗಾವಿ ಜಿಲ್ಲೆಯ ಗೋಕಾಕ (Gokak of Belagavi district) ನಿವಾಸಿಗಳು ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರಪ್ರದೇಶದ ಪ್ರಯಾಗರಾಜ್ (Prayagraj, Uttar Pradesh) ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ (Mahakumbha Mela) ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ 6 ಜನ ಪ್ರಯಾಣಿಕರು ಸೋಮವಾರ ಬೆಳಗಿನ ಜಾವ 5 ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ (The driver lost control and hit the divider) ಪರಿಣಾಮ ವಾಹನ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತೂಫಾನ್ ವಾಹನದಲ್ಲಿ ಒಟ್ಟು 8 ಜನರು ಪ್ರಯಾಣ ಬೆಳೆಸಿದ್ದರು ಎನ್ನಲಾಗಿದ್ದು, ಅವರ ಪೈಕಿ ಆರು ಜನ ಕೊನೆಯುಸಿರೆಳೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದ ಜಬಲ್ಪುರ್‌ನ ಖಿತೌಲಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!