ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದಲ್ಲಿ ವ್ಯಕ್ತಿಯೋರ್ವ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ಹಾಕಿ, ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಫೇಸ್ಬುಕ್ನಲ್ಲಿ (Facebook) ಪೋಸ್ಟ್ ಮಾಡಿದ ಆಘಾತಕಾರಿ ಘಟನೆ ನಡೆದಿದೆ.
ಸದ್ಯ ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಚಿರತೆ ಜೊತೆ Selfie ತೆಗೆದುಕೊಂಡ ಯುವಕ ; ಮುಂದೆನಾಯ್ತು, ಈ ವಿಡಿಯೋ ನೋಡಿ.!
ದಾಂಪತ್ಯ ಕಲಹವೇ (Marital strife) ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. 2019ರಲ್ಲಿ ಮದುವೆಯಾಗಿದ್ದ (Marriage) ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಕಿರುಕುಳ (physical and mental harassment) ನೀಡುತ್ತಿದ್ದ ಕಾರಣ ಪತ್ನಿ ಆತನಿಂದ ದೂರವಾಗಿದ್ದಳು.
ಇದರಿಂದ ಸಿಟ್ಟಿಗೆದ್ದಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಫೇಸ್ಬುಕ್’ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಇದನ್ನು ಓದಿ : ಮೊಬೈಲ್ನಲ್ಲಿ ಮಾತನಾಡುತ್ತಾ ತರಕಾರಿ ಬದಲಿಗೆ ಹೆತ್ತ ಮಗುವನ್ನೇ ಫ್ರಿಡ್ಜ್ನಲ್ಲಿಟ್ಟ ಮಹಾತಾಯಿ ; ಭಯಾನಕ Video viral.!
ಆರೋಪಿಯು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಅಲ್ಲದೇ ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ (contact) ಎಂದು ಪೋಸ್ಟ್ ಹಾಕಿದ್ದ.
ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು. ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು (complaint) ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.