Monday, October 27, 2025

Janaspandhan News

HomeGeneral Newsರೈಲು ಚಲಿಸುತ್ತಿರುವಾಗಲೇ ಕುಸಿದು ಬಿದ್ದ Bridge.!
spot_img
spot_img
spot_img

ರೈಲು ಚಲಿಸುತ್ತಿರುವಾಗಲೇ ಕುಸಿದು ಬಿದ್ದ Bridge.!

- Advertisement -

ಜನಸ್ಪಂದನ ನ್ಯೂಸ್, ಡೆಸ್ಕ್ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ಧಂಗು ಬಳಿಯ ಚಕ್ಕಿ ನದಿಯ ಮೇಲಿರುವ ರೈಲ್ವೆ ಸೇತುವೆ (Bridge) ಯ ತಡೆಗೋಡೆ ಕುಸಿದು ಬಿದ್ದ ಘಟನೆ ಸೋಮವಾರ ಸಂಭವಿಸಿದೆ.

ಈ ಅಪಾಯಕರ ಸಂದರ್ಭದಲ್ಲಿ ರೈಲು ಸೇತುವೆ (Bridge) ಯ ಮೇಲೆ ಚಲಿಸುತ್ತಿತ್ತು, ಆದರೆ ಸುದೈವಶಾತ್ ರೈಲಿನ ಪ್ರಯಾಣಿಕರು ಯಾವುದೇ ತೊಂದರೆಯಾಗದೆ ಪವಾಡಸದೃಶವಾಗಿ ಪಾರಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ಸೇತುವೆ (Bridge) ಯು ಧಂಗು ಪ್ರದೇಶವು ಹಿಮಾಚಲ ಮತ್ತು ಪಂಜಾಬ್ ರಾಜ್ಯಗಳ ಗಡಿಭಾಗದಲ್ಲಿ ನೆಲೆಸಿದೆ. ಈ ಸೇತುವೆ ಪಠಾಣ್ಕೋಟ್ ಮೂಲಕ ಸಾಗುವ ದೆಹಲಿ–ಜಮ್ಮು ರೈಲು ಮಾರ್ಗದ ಮುಖ್ಯ ಭಾಗವಾಗಿದೆ.

ಸೇತುವೆ (Bridge) ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಕಣ್ಣಾರೆ ಕಂಡಂತಿರುವ ಈ ಭಯಾನಕ ಕ್ಷಣಗಳು ಹಲವರಲ್ಲಿ ಆತಂಕ ಮೂಡಿಸಿದ್ದಿವೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಾಂಗ್ರಾ ಜಿಲ್ಲೆಯ ನೂರ್ಪುರದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ರತನ್ ಅವರು, “ಅತಿವೃಷ್ಟಿಯಿಂದ ಸೇತುವೆ (Bridge) ಯ ತಡೆಗೋಡೆ ಕುಸಿದಿದೆ. ಮುನ್ನೆಚ್ಚರಿಕೆಯ ಭಾಗವಾಗಿ ಧಂಗು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಮತ್ತು ಸಂಬಂಧಿತ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ,” ಎಂದು ತಿಳಿಸಿದರು.

Bridge ವಿಡಿಯೋ :


“ಹಳ್ಳಕ್ಕೆ ಬಿದ್ದ ಬೆಳಗಾವಿ–ಮಂಗಳೂರು Bus : ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ”

Bus

ಜನಸ್ಪಂದನ ನ್ಯೂಸ್, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ಬಸ್ (Bus) ಅಪಘಾತಕ್ಕಿಡಾಗಿದೆ.

ಈ ದುರ್ಘಟನೆಯಲ್ಲಿ (Bus accident) ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಅಪಘಾತಕ್ಕೆ ಒಳಗಾದ ವಾಹನ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus) ಆಗಿದೆ.

ಬಸ್ (Bus) ಅಗಸೂರು ಬಳಿ ಇರುವ ಜಗದೀಶ ಡಾಬಾ ಎದುರುದಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ಬೆಳಗಿನ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತ ಸಂಭವಿಸುವ ವೇಳೆಗೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್ (Bus) ಉರುಳಿದ ಶಬ್ದದಿಂದ ಪ್ರಯಾಣಿಕರು ಬೆಚ್ಚಿಬಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಹಾಗೂ ಅಂಕೋಲಾ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ (Bus) ಮೇಲಕ್ಕೆತ್ತುವ ಸಂದರ್ಭದಲ್ಲಿ ಅದರೊಳಗೆ ಸಿಲುಕಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಯಿತು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. Bus ಅಪಘಾತದ ದೃಶ್ಯವನ್ನು ನೋಡಿದರೆ ಇನ್ನು ಹೆಚ್ಚಿನ ಪ್ರಾಣಾಪಾಯ ಸಂಭವಿಸಿರಬಹುದೆಂಬ ಭಾವನೆ ಬರುತ್ತಿದೆ. ಆದರೆ ಅದೃಷ್ಟವಶಾತ್ ಅಂತ ಘಟನೆ ಸಂಭವಿಸಿಲ್ಲ ಎನ್ನಲಾಗುತ್ತಿದೆ.

Bus ಅಪಘಾತದ ವಿಡಿಯೋ :

- Advertisement -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments