ಜನಸ್ಪಂದನ ನ್ಯೂಸ್, ಡೆಸ್ಕ್ : ಉತ್ತರ ಪ್ರದೇಶದ (Uttar Pradesh) ಲಲಿತಪುರದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಬಸ್ಸಿನಿಂದ ಇಳಿದು ರಸ್ತೆ ದಾಟಲು ಓಡುತ್ತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಆತ ಬಹುದೂರ ಹಾರಿ ಬಿದ್ದಿದ್ದಾನೆ.
ಇದನ್ನು ಓದಿ : ಹೆಬ್ಬಾವು ತಿಂದ ಹುಲಿರಾಯ ; ಮುಂದೆನಾಯ್ತು? ಈ Video ನೋಡಿ.!
ಬಸ್ ಅಡ್ಡಬಂದಿದ್ದರಿಂದ ವೇಗವಾಗಿ ಬರುತ್ತಿದ್ದ ಕಾರು ಸಮೀಪಿಸುತ್ತಿರುವುದನ್ನು ಗಮನಿಸದೆ ಮುಂದೆ ಹೋದ ಆತ ಕಾರು ಡಿಕ್ಕಿಯ ರಭಸಕ್ಕೆ ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದ್ದಾನೆ.