ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗಿನ ಜಾವ ನಡೆದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಗಂಭೀರ ಅಪರಾಧಗಳಲ್ಲಿ ನಾಟಿಕೊಂಡಿದ್ದ ಆರೋಪಿ ರಮೇಶ ಕಿಲ್ಲಾರನನ್ನು ಬಂಧಿಸಲು ಪೊಲೀಸರು ಮುಂದಾದ ವೇಳೆ ಗುಂಡಿನ ದಾಳಿ ನಡೆಯಿತು.
ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ 6 ಗಂಟೆಗೆ ಬಂಧನದ ಸಮಯದಲ್ಲಿ ಆರೋಪಿ ಚಾಕುವಿನಿಂದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಪೇದೆ ಷರೀಫ್ ದಫೇದಾರ್ ಅವರಿಗೆ ಚಾಕುವಿನಿಂದ ಗಾಯಗಳಾಗಿವೆ.
Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!
ಮೊದಲಿಗೆ ಎಚ್ಚರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ಶರಣಾಗದೆ ಮುಂದುವರಿದ ಕಾರಣ, ಕಿತ್ತೂರು (Belagavi) ಪಿಎಸ್‌ಐ ಪ್ರವೀಣ ಗಂಗೋಳ್ಳಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಬೆಳಗಾವಿ (Belagavi) ಯ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಪೊಲೀಸ್ ಪೇದೆಗೂ ಚಿಕಿತ್ಸೆ ದೊರೆಯುತ್ತಿದೆ.
ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, ಆರೋಪಿತ ರಮೇಶ ಕಿಲ್ಲಾರನ ವಿರುದ್ಧ 4 ಡಕಾಯಿತಿ, 1 ದರೋಡೆ, 1 ಸಾಮೂಹಿಕ ಅತ್ಯಾಚಾರ, 1 ಶಸ್ತ್ರಾಸ್ತ್ರ ಪ್ರಕರಣ ಮತ್ತು ಇತರ 3 ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಈ ಘಟನೆ ನಂತರ ಬೆಳಗಾವಿ (Belagavi) ಯ ಕಿತ್ತೂರು ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!
ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.
ಶಾಸಕರ ವಿರುದ್ಧವೂ ಕ್ರಮ :
ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Courtesy : Suvarna News