Sunday, September 8, 2024
spot_img
spot_img
spot_img
spot_img
spot_img
spot_img
spot_img

ಇಂದು ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ಮಳೆ ನಿರೀಕ್ಷೆ ; Yellow alert ಘೋಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸ್ವಲ್ಪ ಮಟ್ಟಿಗೆ ತಂಪಾಗಿದೆ.

ಇಂದು ಸಹ (ದಿ.13) ಕರ್ನಾಟಕ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ : ಪೊಲೀಸರ ಮೇಲೆ ಹಲ್ಲೆಗೆ ಯತ್ನ ; rowdy sheeter ಕಾಲಿಗೆ ಗುಂಡೇಟು.!

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ.

ಮತ್ತಷ್ಟು ಓದಿ : Health : ಬೆಳಿಗ್ಗೆ ತಿಂಡಿ ತಿನ್ನುವುದನ್ನು ತಪ್ಪಿಸಿದರೆ ಏನಾಗಬಹುದು.?

ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.

ಹುಬ್ಬಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಹಳಿಯಾಳ, ಸಂಕೇಶ್ವರ, ಜಯಪುರ, ಬೆಳಗಾವಿ ಪಿಟಿಒ, ಕುಕನೂರು, ಮುನಿರಾಬಾದ್, ನಿಪ್ಪಾಣಿ, ಬಂಡೀಪುರ, ಭಾಗಮಂಡಲ, ಪೊನ್ನಂಪೇಟೆ, ಕಿರವತ್ತಿ, ಕೋಟ, ದೇವರಹಿಪ್ಪರಗಿ, ಅಣ್ಣಿಗೆರೆ, ಕಲಘಟಗಿ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಹಗರಿಬೊಮ್ಮನಹಳ್ಳಿ, ಕಳಸ, ಬೇಗೂರು, ವಿರಾಜಪೇಟೆ, ಉಡುಪಿ, ಮುಂಡಗೋಡು, ಪುತ್ತೂರು, ಚಿಕ್ಕೋಡಿ, ಧಾರವಾಡ, ವಿಜಯಪುರ, ಇಂಡಿ, ದೇವದುರ್ಗ, ಕಡೂರು,ಹರಪನಹಳ್ಳಿ, ಬೆಂಗಳೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ : BHEL Recruitment : ಡಿಪ್ಲೋಮಾ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ.!

ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ವಿಜಯಪುರದಲ್ಲಿ 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. (ಎಜೇನ್ಸಿಸ್)

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img