Sunday, September 8, 2024
spot_img
spot_img
spot_img
spot_img
spot_img
spot_img
spot_img

Crime : ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕುವಿನಿಂದ ಭೀಕರವಾಗಿ ಇರಿದು ಕೊಲೆ (kill) ಮಾಡಿದ ಘಟನೆ ನಡೆದಿದೆ.

ಅಂಜಲಿ ಅಂಬಿಗೇರ (19) ಎಂಬ ಯುವತಿಯನ್ನು ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೋ ಚಾಲಕ ಗಿರೀಶ ಸಾವಂತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬಸ್ಸಿನಲ್ಲೇ ರೊಮ್ಯಾನ್ಸ್ : ಮೂರು ಬಿಟ್ಟೋರು ಇವರು, ಛೀ ಅಸಹ್ಯ ಎಂದ ನೆಟ್ಟಿಗರು ; video viral.!

ಅಂಜಲಿಯು ಆರೋಪಿಯ ಪ್ರೀತಿ ನಿರಾಕರಿಸಿದ್ದಕ್ಕೆ ಹುಚ್ಚು ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ.

ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎನ್ನಲಾಗಿದೆ.

ಇದನ್ನು ಓದಿ : Health tips : ಮಂಡಕ್ಕಿ ತಿನ್ನುವುದು ಒಳ್ಳೆಯದೇ ಅಥವಾ ಕೆಟ್ಟದೇ.?

ಕೃತ್ಯ ಎಸಗಿದ ಗಿರೀಶ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನ ತಾಯಿ ಮನೆ ಮನೆ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img