ಜನಸ್ಪಂದನ ನ್ಯೂಸ್, ಹಾವೇರಿ : ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (Haveri Taluk Field Education Officer) ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶಿಕ್ಷಕರೊಬ್ಬರ ಅಮಾನತು ಆದೇಶ (Teacher suspension order) ಹಿಂಪಡೆಯಲು ₹ 50 ಸಾವಿರ ಲಂಚಕ್ಕೆ ಬೇಡಿಕೆ (Demand for bribe) ಇರಿಸಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಸಿಕ್ಕಿಬಿದ್ದಿದ್ದಾರೆ.
ಇದನ್ನು ಓದಿ : ಆರಾಧ್ಯ ಬಚ್ಚನ್ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ.!
ಶಿಕ್ಷಕ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರ ತಂಡವು ರೆಡ್ ಹ್ಯಾಂಡ್ಆಗಿ ಬಲೆಗೆ ಬಿದ್ದಿದ್ದಾರೆ.
ಇತ್ತೀಚೆಗೆ ಶಿಕ್ಷಕರೊಬ್ಬರು ಸಸ್ಪೆಂಡ್ ಆಗಿದ್ದರು. ಅಮಾನತು ಆದೇಶ ಹಿಂಪಡೆಯುವಂತೆ (Withdrawal of suspension order) ಶಿಕ್ಷಕರು ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಮೌನೇಶ್, ₹ 50 ಸಾವಿರ ಕೊಟ್ಟರೆ ಆದೇಶ ಹಿಂಪಡೆಯುವುದಾಗಿ ಹೇಳಿದ್ದರು ಎನ್ನಲಾಗಿದೆ.
ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!
ಈ ಬಗ್ಗೆ ಶಿಕ್ಷಕ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಬಸವೇಶ್ವರನಗರದ 13ನೇ ಕ್ರಾಸ್‌ನಲ್ಲಿರುವ ಮನೆಗೆ ಹೋಗಿದ್ದ ದೂರುದಾರ ಶಿಕ್ಷಕ, ಮುಂಚಿತವಾಗಿ ₹ 15 ಸಾವಿರ ನೀಡಿದ್ದರು. ಮೌನೇಶ್ ಅವರು ಹಣ ಪಡೆಯುತ್ತಿದ್ದಂತೆ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.