Sunday, September 8, 2024
spot_img
spot_img
spot_img
spot_img
spot_img
spot_img
spot_img

News : ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ ; ಸಚಿವ ಬಿ.ನಾಗೇಂದ್ರ ರಾಜೀನಾಮೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ.

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನು ಓದಿ : ಇಂಟರ್ನೆಟ್ ಇಲ್ಲದಿದ್ದರೂ WhatsAppನಲ್ಲಿ ಮೆಸೇಜ್, ಕಾಲ್ ಮಾಡಬೇಕೆ.? ಇಲ್ಲಿದೆ ಸುಲಭ ಟ್ರಿಕ್.!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ನಾಯಕರು ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರ ಸಲ್ಲಿಸಿದ್ದರು.

ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ , ಬೈರತಿ ಬಸವರಾಜ್, ರವಿಕುಮಾರ್, ಅಶ್ವಥ್ ನಾರಾಯಣ, ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿ ಅಕ್ರಮ ಸಂಬಂಧ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು.

ಇನ್ನೂ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹ ತಿಳಿಸಿದ್ದರು.

ಇದನ್ನು ಓದಿ : Air show ವೇಳೆ ಮುಖಾಮುಖಿ ಡಿಕ್ಕಿಯಾದ ವಿಮಾನ : ಓರ್ವ ಪೈಲಟ್ ಸಾವು ; ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಚಿವ ಬಿ.ನಾಗೇಂದ್ರಗೆ (B Nagendra) ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img