Friday, April 25, 2025
spot_img
HomeGeneral NewsEx ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!
spot_img
spot_img
spot_img

Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

- Advertisement -
WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಅಸುಂಡಿಯಲ್ಲಿ ಮಾಜಿ ಪ್ರಿಯಕರನ (Ex boyfriend) ಕಿರುಕುಳಕ್ಕೆ ಬೇಸತ್ತು ಮದುವೆ ನಿಶ್ಚಯವಾಗಿದ್ದ ಯುವತಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.

ಗದಗ ತಾಲೂಕಿನ ಅಸುಂಡಿಯ (Asundi of Gadag Taluk) 29 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಮೇ 8ರಂದು ಯುವತಿಯ ಮದುವೆ ನಿಗದಿಯಾಗಿತ್ತು. ಆದರೆ ಡೆತ್ ನೋಟ್ ಬರೆದಿಟ್ಟು ಆಕೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಇನ್ನೂ ಯುವಕನ ಕಿರುಕುಳಕ್ಕೆ (Harassment of youth) ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

5 ವರ್ಷಗಳ ಹಿಂದೆ ಯುವಕನ ಜೊತೆ ಯುವತಿಗೆ ಲವ್ ಆಗಿ ಬ್ರೇಕಪ್ ಆಗಿತ್ತು. ನಿನಗೆ ತೊಂದರೆ ಕೊಡಲ್ಲ ಅಂತ ಮಾಜಿ ಪ್ರೇಮಿ ಹೇಳಿದ್ದ. ಆದರೆ ಐದು ವರ್ಷಗಳ ಬಳಿಕ ಆತ ಮದುವೆ ಆಗು ಎಂದು ಯುವತಿಗೆ ಕಿರುಕುಳ ನೀಡುತ್ತಿದ್ದ. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ, ವಿಡಿಯೋ ವೈರಲ್ ಮಾಡುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಗದಗ ಗ್ರಾಮೀಣ ಪೊಲೀಸ್ ಠಾಣೆ (Gadag Rural Police Station Area) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಸುದ್ದಿ : Drink : ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕ ; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಮದ್ಯ (Drink) ನೀಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ಬೆನ್ನಲ್ಲೇ ಶಿಕ್ಷಕನನ್ನು ಸಸ್ಪೆಂಡ್ ಮಾಡಿದ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ (Katni District of Madhya Pradesh) ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ (Govt Primary School Teacher) ಲಾಲ್ ನವೀನ್ ಪ್ರತಾಪ್ ಸಿಂಗ್ ಎಂಬ ಶಿಕ್ಷಕ ಅಮಾನತು ಮಾಡಲಾಗಿದೆ.‌

ಇದನ್ನು ಓದಿ : Astrology : ಎಪ್ರಿಲ್‌ 20 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರ ಗಮನಕ್ಕೆ ಈ ವಿಡಿಯೋ ಬಂದ ಕೂಡಲೇ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಿಕ್ಷಣ ಅಧಿಕಾರಿ ಒಪಿ ಸಿಂಗ್ (District Education Officer OP Singh) ಅವರಿಗೆ ಸೂಚಿಸಿದ್ದರು.

ಮಕ್ಕಳಿಗೆ ಮದ್ಯ ಕುಡಿಯಲು ಪ್ರೋತ್ಸಾಹ ನೀಡುವುದು ಮತ್ತು ಶಿಕ್ಷಕರ ಘನತೆಗೆ ಕುಂದು ತಂದ ಆರೋಪದ ಮೇಲೆ ಶಿಕ್ಷಕನನ್ನು ಮಧ್ಯಪ್ರದೇಶ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ ಅಡಿಯಲ್ಲಿ ತಕ್ಷಣವೇ ಅಮಾನತುಗೊಳಿಸಲಾಗಿದೆ (suspended) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಕೈದಿಗಳಿಗಾಗಿ ಮೊದಲ ಬಾರಿಗೆ “Sex Room” ಪ್ರಾರಂಭ ; ಯಾವ ದೇಶದಲ್ಲಿ ಗೊತ್ತಾ.?

ವಿಡಿಯೋದಲ್ಲಿ ಶಿಕ್ಷಕ ಚಿಕ್ಕ ಹುಡುಗರಿಗೆ ಕಪ್‌ಗಳಲ್ಲಿ ಪಾನೀಯ ನೀಡುತ್ತಿರುವುದನ್ನು ಕಾಣಬಹುದು. ಪಾನೀಯ ಕುಡಿಯುವುದಕ್ಕಿಂತ ಮುಂಚೆ ನೀರನ್ನು ಬೆರೆಸಿ ಎಂದು ಹೇಳಲಾಗಿದೆ.

WhatsApp Channel Join Now
Telegram Group Join Now
Instagram Account Follow Now
- Advertisement -
spot_img
spot_img
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments