Friday, October 18, 2024
spot_img
spot_img
spot_img
spot_img
spot_img
spot_img
spot_img

ರಾಜ್ಯದ ಈ ಜಿಲ್ಲೆಗಳಿಗೆ yellow alert ಘೋಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರದಿಂದ ಮಳೆ ಆಗಲಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಂಡಿದೆ.

ಇದನ್ನು ಓದಿ : Health : ದಿನಂಪ್ರತಿ ನಾಲಿಗೆಯನ್ನು ಸ್ವಚ್ಚಗೊಳಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿಗೆ ಗೊತ್ತಾ.?

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಗದಗ, ಧಾರವಾಡ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮೇ ಹಾಗೂ ಜೂನ್‌ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಮುಂಗಾರು ಮಳೆ ಜೂನ್‌ 2 ರಂದು ಆಗಮಿಸಿದ್ದರೂ ಹೆಚ್ಚಿನ ಪ್ರಭಾವ ಬೀರಿಲ್ಲ. ಇದರಿಂದ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ.

ವಿಶೇಷವಾಗಿ ಮೇ ಹಾಗೂ ಜೂನ್‌ ತಿಂಗಳಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಭಾರೀ ಹೆಚ್ಚಾಗಿತ್ತು. ಆದರೆ, ಮುಂಗಾರು ಮಳೆ ಆಗಮನದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್‌ 2ನೇ ವಾರದಿಂದಲೇ ಮಳೆ ಪ್ರಮಾಣ ಕಡಿಮೆಯಾಗುತ್ತಾ ಸಾಗಿದೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಮುಂದುವರೆದಿದೆ. ಒಣಹವೆಗಳು ಕಾಣಿಸಿಕೊಳ್ಳುತ್ತಿದ್ದು ಮುಂಗಾರು ಮಳೆಯ ಬಗ್ಗೆ ಆತಂಕ ಪಡುವಂತೆ ಮಾಡಿದೆ.

ಇದನ್ನು ಓದಿ : ನಡು ರಸ್ತೆಯಲ್ಲೇ ಯುವಕರಿಬ್ಬರ ಅಪಾಯಕಾರಿ ಬೈಕ್ ಸ್ಟಂಟ್ : ಹೆಲ್ಮೆಂಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿ ಬುದ್ದಿ ಹೇಳಿದ ಅಂಕಲ್ ವಿಡಿಯೋ ವೈರಲ್.!

ಈ ಮಧ್ಯೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್‌ 20 ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ

ಜೂನ್‌ 3ನೇ ವಾರದಲ್ಲಿ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img