Sunday, September 8, 2024
spot_img
spot_img
spot_img
spot_img
spot_img
spot_img
spot_img

ಹಾಕಿ ಸ್ಟಾರ್ ಆಟಗಾರನ ವಿರುದ್ಧ ಅತ್ಯಾಚಾರ ಆರೋಪ ; FIR ದಾಖಲು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ಭಾರತೀಯ ಹಾಕಿ ತಂಡದ ಡಿಫೆಂಡರ್ (defender) ವರುಣ್ ಕುಮಾರ್ ವಿರುದ್ಧ ಮದುವೆ ಆಗುವುದಾಗಿ ಹೇಳಿ ನಂಬಿಸಿ ಮೋಸ (fraud) ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.

ಯುವತಿಯು, ವರುಣ್ ಕುಮಾರ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದು, ಪೋಕ್ಸೋ (Pocso) ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಸಿಎಂ ಸಿದ್ಧರಾಮಯ್ಯ ಸೇರಿ ನಾಲ್ವರು ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದ ಹೈಕೋರ್ಟ್.!

ಯುವತಿ 17ನೇ ವಯಸ್ಸಿನಲ್ಲಿರುವಾಗ ಮದುವೆಯಾಗುವುದಾಗಿ (marriage) ನಂಬಿಸಿ ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಆರೋಪಿಸಿದ್ದಾಳೆ.

ಬೆಂಗಳೂರಿನ ಸಾಯಿ ಸ್ಟೇಡಿಯಂಗೆ ಹಾಕಿ ಪಂದ್ಯಗಳಿಗಾಗಿ ಭೇಟಿ ನೀಡಿದ ವೇಳೆ ವರುಣ್ ಕುಮಾರ್ ಲೈಂಗಿಕ ಸಂಬಂಧ (sexual relationship) ಹೊಂದಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ವರುಣ್ ಕುಮಾರ್, ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ. 17 ವರ್ಷದವಳಾಗಿದ್ದ ಆಕೆಯನ್ನು ಪ್ರೀತಿಸುವುದಾಗಿ (love) ನಂಬಿಸಿದ್ದ ವರುಣ್ ಮನೆಯವರನ್ನು ಒಪ್ಪಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆದರೆ, ಈಗ ಮದುವೆಯಾಗದೇ ವಂಚಿಸಿದ್ದಾನೆ ಎಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನು ಓದಿ : ಇಂದಿನಿಂದ 29 ರೂ.ಗೆ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ ಲಭ್ಯ ; ಎಲ್ಲೆಲ್ಲಿ ಸಿಗುತ್ತದೆ.?

2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದೊಯ್ದು ಬಲವಂತವಾಗಿ‌ ದೈಹಿಕ ಸಂಪರ್ಕ ಬೆಳಸಿದ್ದ. ಇದಾದ ಬಳಿಕವೂ ಆಗಾಗ ದೈಹಿಕ ಸಂಪರ್ಕ ಮಾಡಿದ್ದ. ಒಂದು ವರ್ಷದ ಹಿಂದೆ ನನ್ನ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ಸಾಂತ್ವನ ಹೇಳಿ ಹೋಗಿದ್ದ. ಆದರೆ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ದೂರುದಾರ ಯುವತಿ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದ ತರಬೇತಿ (training) ಪಡೆಯುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿ ಬಳಿಕ ದೈಹಿಕ ಸಂಬಂಧ ಹೊಂದಿದ್ದರು.

ವರುಣ್ ಕುಮಾರ್ 2021ನೇ ಸಾಲಿನ ಅರ್ಜುನ ಪ್ರಶಸ್ತಿ ಪಡೆದಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ (Hockey team) ಕಂಚಿನ ಪದಕ ಗೆದ್ದ ತಂಡದ ಸದಸ್ಯರಾಗಿದ್ದ ವರುಣ್​ಗೆ ಹಿಮಾಚಲ ಪ್ರದೇಶ ಸರ್ಕಾರ 1 ಲಕ್ಷ ಬಹುಮಾನ ನೀಡಿ ಗೌರವಿಸಿತ್ತು.

ಇದನ್ನು ಓದಿ : ನಾಯಿಗಳ ಗುಂಪಿನೊಂದಿಗೆ ಕಾಳಿಂಗ ಸರ್ಪದ ಏಕಾಂಗಿ ಹೋರಾಟ ; ವಿಡಿಯೋ ವೈರಲ್.!

ಹಿಮಾಚಲ ಪ್ರದೇಶದವರಾದ ವರುಣ್ ಕುಮಾರ್ ಪಂಜಾಬ್‌ನ ಜಲಂಧರ್‌ನಲ್ಲಿ ವಾಸಿಸುತ್ತಿದ್ದರು. ಸದ್ಯ ಪರಾರಿಯಾಗಿರುವ (escape) ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img