Monday, December 23, 2024
HomeNational Newsಸಗಣಿ ರಾಶಿಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ ಹಚ್ಚಿದ Police.!
spot_img

ಸಗಣಿ ರಾಶಿಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ ಹಚ್ಚಿದ Police.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಕಳ್ಳ ತಾನೂ ಕದ್ದ 20 ಲಕ್ಷ ರೂ. ಹಣವನ್ನು ಹಸುವಿನ ಸಗಣಿಯಲ್ಲಿ (dung) ಬಚ್ಚಿಟ್ಟಿದ್ದು, ಪೊಲೀಸರು ಹಣವನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಒಡಿಶಾದ (Odisha) ಬಾಲಾಸೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಆಫೀಸರ್ ಹೆಸರಿನಲ್ಲಿ ರಿಯಲ್ ಪೊಲೀಸ್ ಅಧಿಕಾರಿಗೆ ವಂಚಿಸಲು ಯತ್ನಿಸಿದ ಫೇಕ್ ಪೊಲೀಸ್; ವಿಡಿಯೋ ಸಖತ್ Viral.!

ಕಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ದಾಳಿ ನಡೆಸಿದ ಹೈದರಾಬಾದ್ ಮತ್ತು ಒಡಿಶಾ ಪೊಲೀಸರ (Hyderabad and Odisha Police) ತಂಡವು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ (agricultural based company) ಕೆಲಸ ಮಾಡುತ್ತಿದ್ದ ಗೋಪಾಲ್ ಎಂಬಾತ, ತಾನೂ ಕೆಲಸ ಮಾಡುತ್ತಿದ್ದ ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದಿದ್ದ.

ಇದನ್ನು ಓದಿ : Health : ಕಾಲು ಮೇಲೆ ಕಾಲು ಹಾಕಿ ಕುಳಿತುಕೊಳ್ಳುವ ಅಭ್ಯಾಸವಿದೆಯೇ? ಈ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ.!

ನಂತರ ತನ್ನ ಸಂಬಂಧಿ ರವೀಂದ್ರ ಬೆಹೆರಾ ಎಂಬುವವರಿಗೆ ಹಣ ಕೊಟ್ಟು ತನ್ನೂರಿಗೆ ಕಳುಹಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರ ತಂಡವು ಕಮರ್ದಾ ಪೊಲೀಸರೊಂದಿಗೆ ಆರೋಪಿಯ ಸಂಬಂಧಿ ರವೀಂದ್ರ ಅವರ ಮನೆ ಮೇಲೆ ದಾಳಿ ನಡೆಸಿದರು. ಈ ವೇಳೆ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ (hidden) ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದಾರೆ.

 

ಹಿಂದಿನ ಸುದ್ದಿ ಓದಿ : ನಗ್ನ ಪೋಟೋ ಕಳುಹಿಸುವಂತೆ ವೈದ್ಯೆಗೆ ಕಿರುಕುಳ ನೀಡಿದ PSI.!

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು (private hospital doctor) ದೂರು ನೀಡಿದ್ದಾರೆ.

ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಪಿಎಸ್‌ಐ ಕಿರುಕುಳ (harassment) ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್​ ಬಿ. ದಯಾನಂದ್​​ ಅವರಿಗೆ ವೈದ್ಯೆ ದೂರು ನೀಡಿದ್ದಾರೆ.

ಇದನ್ನು ಓದಿ : BPNL : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ​​ ವಿರುದ್ಧ ಇಂತದ್ದೊಂದು ಆರೋಪ ಕೇಳಿಬಂದಿದೆ.

ಫೇಸ್​ಬುಕ್​​ ಮೂಲಕ 2020ರಲ್ಲಿ ಪಿಎಸ್​​ಐಗೆ ವೈದ್ಯೆಯ ಪರಿಚಯವಾಗಿದೆ. ಈ ವೇಳೆ ಪೊಲೀಸ್​​ ಅಕಾಡೆಮಿಯಲ್ಲಿ PSI ಟ್ರೈನಿಂಗ್​ನಲ್ಲಿದ್ದರು. ಯುವತಿ ಸಹ MBBS ವ್ಯಾಸಂಗ ಮಾಡುತ್ತಿದ್ದಳು. ಅದೇ ವರ್ಷ ಇಬ್ಬರೂ ಪರಸ್ಪರ ಸ್ನೇಹ ಬೆಳೆದು ಪ್ರೀತಿಯಲ್ಲಿ (love) ಬಿದ್ದಿದ್ದರು ಎನ್ನಲಾಗಿದೆ.

ಇದನ್ನು ಓದಿ : Belagavi : ಬೆಳಗಾವಿಯಲ್ಲಿ ಹೀನ ಕೃತ್ಯ ; ಸಾರ್ವಜನಿಕವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!

ಪಿಎಸ್‌ಐ ಯುವತಿಗೆ ನಗ್ನ ಫೋಟೋ (Nude photo) ಕಳಿಸುವಂತೆ ಕಿರುಕುಳ ನೀಡಿದ್ದು, ಈ ಮಾತಿಗೆ ಒಪ್ಪದಿದ್ದಕ್ಕೆ ವೈದ್ಯೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವೈದ್ಯೆಯ call record ತೆಗೆದು ಕಿರುಕುಳ ನೀಡುತ್ತಿರುವ ಆರೋಪಿಸಲಾಗಿದೆ. ಇದರಿಂದ ನೊಂದ ವೈದ್ಯೆ ಬೆಂಗಳೂರು ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೇ ವೈದ್ಯೆಯಿಂದ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದಾರೆ. ಹಣ ವಾಪಸ್ ಕೇಳಿದ್ದಕ್ಕೆ ಹಣ ಬೇಕಾದರೆ ಠಾಣೆಗೆ ಬಂದು ತೊಗೊಂಡು ಹೋಗು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಮನನೊಂದ ವೈದ್ಯೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು (suicide attempt) ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವರದಾನವಾದ PM ವಿದ್ಯಾಲಕ್ಷ್ಮೀ ಯೋಜನೆ ; 10 ಲಕ್ಷದವರೆಗೆ ಸಾಲ.!

ಆದರೆ ಈ ಕೇಸಿನಲ್ಲಿ ವೈದ್ಯೆಯ ಹೆಸರಿನಲ್ಲಿ ಫೇಸ್‌ಬುಕ್‌ fake account ಕ್ರಿಯೇಟ್ ಮಾಡಲಾಗಿದೆ ಎನ್ನಲಾಗಿದೆ. ಅಸಲಿಗೆ ಸ್ವಾತಿ ದ್ಯಾಮಕ್ಕನವರ್ ಅನ್ನುವ ಡಾಕ್ಟರ್ ಅಕೌಂಟ್ ಫೇಕ್ ಆಗಿದೆ. ಈ ಫೇಕ್ ಅಕೌಂಟ್ ನ್ನು ಸ್ವಾತಿಯ ಸಹೋದರ ಎಂದು ಹೇಳಿಕೊಂಡು ಬಂದಿರುವ ಇದೇ ಸಿದ್ದಪ್ಪ ದ್ಯಾಮಕ್ಕನವರ್ ಕ್ರಿಯೆಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಆಸಾಮಿ ವೈದ್ಯೆ ಸ್ವಾತಿ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣ ಹೊಡೆಯಲು ಉಪಾಯ ಮಾಡಿದ್ದ. ಫೇಸ್‌ಬುಕ್‌ ಮೂಲಕ PSI ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಹಣ ವಸೂಲಿ ಮಾಡಿದ್ದನು. ಸ್ವಾತಿ ಹೆಸರಿನಲ್ಲಿ ಇಲ್ಲಿಯವರೆಗೆ ಪಿಎಸ್‌ಐ 50 ಸಾವಿರ ರೂ. ಹಣ ಪಡೆದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಹಣವನ್ನು ಮರಳಿ ಕೊಡದಿದ್ದಾಗ ಸಬ್ ಇನ್ಸಪೆಕ್ಟರ್ ಕೋಪಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಇದು fake Facebook account ಎಂಬುದು ಪತ್ತೆಯಾಗಿದೆ.

ಇದನ್ನು ಓದಿ : Hindu ಸಂಪ್ರದಾಯದ ಪ್ರಕಾರ, ಯಾರು ಯಾವ ಬೆರಳಿನಿಂದ ತಿಲಕವನ್ನು ಇಟ್ಟುಕೊಳ್ಳಬೇಕು.?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತ ನಗರ ಠಾಣೆ ಇನ್ಸಪೆಕ್ಟರ್ ತನಿಖೆ ಮಾಡುತ್ತಿದ್ದಾರೆ. ಈವರೆಗೂ ಆ ಯುವತಿ (ವೈದ್ಯೆ) ವಿಚಾರಣೆಗೆ ಹಾಜರಾಗಿಲ್ಲ. ಹುಡುಗಿ ರೀತಿ ಚಾಟ್ ಮಾಡಿ ಹುಡುಗಿ ಧ್ವನಿಯಲ್ಲಿ ಮಾತನಾಡಿ ಟ್ರ್ಯಾಪ್‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಸಬ್ ಇನ್ಸ್‌ಪೆಕ್ಟರ್ ಮತ್ತು ಯುವತಿ ನಡುವೆ ಹಣದ ವ್ಯವಹಾರ ನಡೆದಿದೆ. ಸಹೋದರ ಅಂತ ಬಂದಿರುವ ವ್ಯಕ್ತಿಯ ಬಗ್ಗೆ ಅನುಮಾನವಿದೆ. ಅಧಿಕಾರಿಯನ್ನೇ trap ಮಾಡಲು ಯತ್ನಿಸಿದಂತಿದೆ. ತನಿಖೆ ನಂತರ ಅಸಲಿ ಕಹಾನಿ ಗೊತ್ತಾಗಲಿದೆ ಎಂದು ಬೆರಳು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments