Thursday, September 19, 2024
spot_img
spot_img
spot_img
spot_img
spot_img
spot_img
spot_img

RDPR : ಗ್ರಾಮ ಪಂಚಾಯತಿಗಳಲ್ಲಿ ಭರ್ಜರಿ ನೇಮಕಾತಿಗೆ ಸರ್ಕಾರ ಆದೇಶ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಪಂಚಾಯತ್ ರಾಜ್‌ ಆಯುಕ್ತಾಲಯವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ನಾಲ್ಕು ಪದನಾಮಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಿಗೆ ಆದೇಶ ನೀಡಿದೆ.

ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಇದನ್ನು ಓದಿ : ಎನ್‌ಎಂಡಿಸಿ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ : ನೇರ ಸಂದರ್ಶನದ ಮೂಲಕ ನೇಮಕಾತಿ.!

ಆದೇಶ ನೀಡಿರುವ ಆ ಹುದ್ದೆಗಳು :

  • ಕರವಸೂಲಿಗಾರರು/ಬಿಲ್‌ ಕಲೆಕ್ಟರ್‌.
  • ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು.
  • ವಾಟರ್ ಆಪರೇಟರ್.
  • ಸ್ವಚ್ಛತಾಗಾರರು.

ಹುದ್ದೆವಾರು ವಿದ್ಯಾರ್ಹತೆಗಳ ವಿವರ :

ಕರವಸೂಲಿಗಾರರು/ ಬಿಲ್‌ ಕಲೆಕ್ಟರ್ :

ದ್ವಿತೀಯ ಪಿಯುಸಿ ಪಾಸ್.

ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು :

ದ್ವಿತೀಯ ಪಿಯುಸಿ ಪಾಸ್‌ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು, ಪ್ರಮಾಣ ಪತ್ರ ಹೊಂದಿರುವುದು.
ವಾಟರ್ ಆಪರೇಟರ್ : ಕನಿಷ್ಠ 7ನೇ ತರಗತಿ.
ಸ್ವಚ್ಛತಾಗಾರರು :

ಯಾವುದೇ ವಿದ್ಯಾರ್ಹತೆ ಕಡ್ಡಾಯವಲ್ಲ.

 

ಈ ಮೇಲಿನ ಹುದ್ದೆಗಳಿಗೆ ಜಿಲ್ಲಾ ಪಂಚಾಯಿತಿ ಇಂದ ಈಗಾಗಲೇ ಅನುಮೋದನೆ ದೊರೆತಿದ್ದು, ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ, ಆಯ್ಕೆಪಟ್ಟಿ ಬಿಡುಗಡೆ ಮಾಡಲಿವೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೇ ಇದ್ದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನು ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ.

ಇದನ್ನು ಓದಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯ 17,727 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಪ್ರಸ್ತುತ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸಿಬ್ಬಂದಿ ಸಂಖ್ಯೆಯನ್ನು ನಿಗದಿಪಡಿಸುವ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಆದ್ದರಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳು ಮುಂದಿನ ಆದೇಶ ಬರುವವರೆಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಂಖ್ಯೆಯನ್ನು ನಿಗದಿಪಡಿಸುವ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ಹಾಗೂ ಮುಂದಿನ ಆದೇಶ ನಿರೀಕ್ಷಿಸುವಂತೆ ತಿಳಿಸಿರುತ್ತದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img