ಜನಸ್ಪಂದನ ನ್ಯೂಸ್, ಬಾರಾಮತಿ: ಮಹಾರಾಷ್ಟ್ರದ ಬಾರಾಮತಿ ಸಮೀಪ ಇಂದು ಬೆಳಿಗ್ಗೆ ಸಣ್ಣ ವಿಮಾನವೊಂದು ಅಪಘಾತಕ್ಕೀಡಾದ ಘಟನೆ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವಿಮಾನದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮುಂಬೈನಿಂದ ಬಾರಾಮತಿಗೆ ಆಗಮಿಸುತ್ತಿದ್ದ ಸಣ್ಣ ವಿಮಾನವು ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ, ವಿಮಾನ ನಿಲ್ದಾಣದ ಸಮೀಪದ ಹೊಲ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದ ನಂತರ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ವಿಮಾನ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತ :
#WATCH | A plane crash reported in Baramati, Maharashtra. More details awaited.
Visuals from the spot. pic.twitter.com/xkx0vtY5cp
— ANI (@ANI) January 28, 2026
ರಕ್ಷಣಾ ಕಾರ್ಯಾಚರಣೆ ತ್ವರಿತ :
ಘಟನೆಗೆ ತಕ್ಷಣ ಸ್ಪಂದಿಸಿದ ಸ್ಥಳೀಯ ಆಡಳಿತ ಹಾಗೂ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, 6 ಮಂದಿ ಮೃತಪಟ್ಟಿರುವ ಸಾಧ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಜಿತ್ ಪವಾರ್ ಕುರಿತು ಗೊಂದಲ :
ಅಪಘಾತದ ಸುದ್ದಿ ಹೊರಬರುತ್ತಿದ್ದಂತೆ ಅಜಿತ್ ಪವಾರ್ ಅವರ ಆರೋಗ್ಯದ ಬಗ್ಗೆ ಆತಂಕ ವ್ಯಕ್ತವಾಯಿತು. ಆದರೆ, ಅವರ ಆಪ್ತ ಮೂಲಗಳಿಂದ ಇನ್ನೂ ಅಧಿಕೃತ ದೃಢೀಕರಣ ಬಂದಿಲ್ಲ. ಕೆಲ ಮೂಲಗಳು ಅವರು ವಿಮಾನದಲ್ಲಿದ್ದರು ಎಂದು ಹೇಳಿದ್ದರೆ, ಮತ್ತೊಂದು ಮೂಲಗಳು ಅವರು ಬೇರೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿಸಿವೆ. ಈ ಕುರಿತು ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗಿದೆ.
ಡಿಜಿಸಿಎ ತನಿಖೆ ಸಾಧ್ಯತೆ :
ವಿಮಾನ ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ತಾಂತ್ರಿಕ ದೋಷ, ಹವಾಮಾನ ಅಥವಾ ಲ್ಯಾಂಡಿಂಗ್ ಸಮಯದ ತಪ್ಪು ಎಂಬ ಎಲ್ಲಾ ಅಂಶಗಳ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನಿಖೆ ನಡೆಸುವ ಸಾಧ್ಯತೆ ಇದೆ.
ಇದನ್ನು ಓದಿ : Takeoff ಹಂತದಲ್ಲಿಯೇ ವಿಮಾನ ನೆಲಕ್ಕೆ : ಇಬ್ಬರು ಸಾವು ; ವಿಡಿಯೋ ವೈರಲ್.!
ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ :
ಘಟನೆ ಹೊರಬರುತ್ತಿದ್ದಂತೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಬಾರಾಮತಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಮತ್ತು ಅಧಿಕಾರಿಗಳು ವಿಮಾನ ನಿಲ್ದಾಣದತ್ತ ಧಾವಿಸಿದ್ದಾರೆ.
Disclaimer : ಈ ಸುದ್ದಿ ಪ್ರಾಥಮಿಕ ವರದಿಗಳ ಆಧಾರದಲ್ಲಿ ಪ್ರಕಟಿಸಲಾಗಿದ್ದು, ಅಧಿಕೃತ ಮಾಹಿತಿ ಲಭ್ಯವಾದ ನಂತರ ವಿವರಗಳಲ್ಲಿ ಬದಲಾವಣೆ ಸಂಭವಿಸಬಹುದು. ಯಾವುದೇ ಊಹಾಪೋಹ ಅಥವಾ ದೃಢೀಕರಣವಿಲ್ಲದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿಲ್ಲ.





