Thursday, September 19, 2024
spot_img
spot_img
spot_img
spot_img
spot_img
spot_img
spot_img

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಅಧಿಕಾರಿಯ ಹೆಗಲೇರಿದ ಉಪ ಮೇಯರ್ ; ಪೋಟೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸೂರತ್‌ನ ಉಪಮೇಯರ್, ಅಗ್ನಿಶಾಮಕ ಸಿಬ್ಬಂದಿಯೊಬ್ಬರ ಬೆನ್ನಿನ ಮೇಲೆ ಕುಳಿತು ಸವಾರಿ ಮಾಡಿದ ಘಟನೆ ನಡೆದಿದೆ.

ಸೂರತ್‌ನ ಉಪಮೇಯರ್ ನರೇಂದ್ರ ಪಾಟೀಲ್ ಅಗ್ನಿಶಾಮಕ ಸಿಬ್ಬಂದಿಯೊಬ್ಬರ ಬೆನ್ನಿನ ಮೇಲೆ ಕುಳಿತು ಪ್ರವಾಹ ಪರಿಸ್ಥಿತಿ ವೀಕ್ಷಿಸಿದ್ದು, ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇದನ್ನು ಓದಿ : ಮದುವೆಯೇ ಆಗಿಲ್ಲ ಎಂದ ಸಂಸದರು KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟರು ; ಪೋಟೋ ವೈರಲ್.!

ಪೋಟೋ ನೋಡಿದ ನೆಟ್ಟಿಗರು ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಟುವಾಗಿ ಟೀಕಿಸಿದ್ದಾರೆ

ಬಿಜೆಪಿ ನಾಯಕರು ಸಹ ಆಗಿರುವ ನರೇಂದ್ರ ಪಾಟೀಲ್, ಕಾಲು ನೋವು ಇದೆ ಎಂದು ಸಬೂಬು ಹೇಳಿ ಕೆಸರಿನ ಪ್ರದೇಶದಲ್ಲಿ ಅಗ್ನಿಶಾಮಕ ಸಿಬ್ಬಂದಿಯ ಬೆನ್ನೇರಿದ್ದಾರೆ.

ಪಾಟೀಲರನ್ನು ಅಗ್ನಿಶಾಮಕ ಸಿಬ್ಬಂದಿ ಬೆನ್ನ ಮೇಲೆ ಹೊತ್ತುಕೊಂಡು ತುಂಬಾ ದೂರ ಸಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ವರ್ಷಕ್ಕೊಬ್ಬ ಗಂಡನಿಗೆ ಡಿವೋರ್ಸ್ ಕೊಡ್ತಾಳೆ ಈ lady ; ಇಲ್ಲಿಯವರೆಗೆ ಎಷ್ಟು ಡಿವೋರ್ಸ್ ಪಡೆದಿದ್ದಾಳೆ ಗೊತ್ತಾ.?

ಘಟನೆಯ ಬಗ್ಗೆ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಪ್ರತಿಕ್ರಿಯಿಸಿದ್ದು, ನರೇಂದ್ರ ಪಾಟೀಲ್ ಈಚೆಗೆ ಸೂರತ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಹೆಚ್ಚು ಸಮಯ ನಿಂತಿದ್ದರಿಂದ ಅವರಿಗೆ ಕಾಲು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅವರಿನ್ನು ಹೊತ್ತುಕೊಂಡು ಹೋಗುವ ಮೂಲಕ ಸಹಾಯ ಮಾಡಲಾಯಿತು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img