Thursday, September 19, 2024
spot_img
spot_img
spot_img
spot_img
spot_img
spot_img
spot_img

ನಕಲಿ ದಾಖಲೆ ಸೃಷ್ಟಿ ಆರೋಪ ; ಸಿಎಂ ಆಪ್ತನ ವಿರುದ್ಧ FIR ದಾಖಲು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಮೈಸೂರಿನ (mysore) ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ವಿರುದ್ಧ ನಕಲಿ ದಾಖಲೆ ಸಲ್ಲಿಕೆಯ ಆರೋಪ ಕೇಳಿಬಂದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನೂ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court of Representatives) ಆದೇಶಿಸಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Suicide : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್ ; ಸ್ಥಿತಿ ಗಂಭೀರ.!

ಮೈಸೂರಿನ ಉದ್ಬುರು ಗ್ರಾಮದಲ್ಲಿ ಸೋಮಶೇಖರ್ ಅವರ ಪತ್ನಿ ಹೆಸರಲ್ಲಿರುವ 9.21 ಎಕರೆ ಜಮೀನಿನಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ನಕಲಿ ದಾಖಲೆಗಳನ್ನು (Duplicate documents) ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಎಂ.ಕೆ.ಸೋಮಶೇಖರ್, ಪತ್ನಿ ಎಲ್.ಕುಸುಮಾ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ಅಧಿಕಾರಿಗಳು, ಉದೂರು ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಭೂಮಾಪಕರು ಮತ್ತು ಇನ್ನಿತರರು ಸೇರಿಕೊಂಡ, ಒಳಸಂಚು (intrigue) ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ರಮವಾಗಿ ಹಣ ಸಂಪಾದಿಸಲು ಕಾನೂನು ಬಾಹಿರ ಲೇಔಟ್ ನಿರ್ಮಿಸಿದ್ದಾರೆ. ನಕಲಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

ಅಲ್ಲದೇ ಸರ್ಕಾರದ ದಸ್ತಾವೇಜುಗಳನ್ನು ಖೋಟಾ ಮಾಡಲಾಗಿದೆ ಎಂದು ಆದೀಶ್ ಸಾಗರ್ ಗಂಭೀರವಾದ ಆರೋಪ ಮಾಡಿದ್ದಾರೆ.

ಇದನ್ನು ಓದಿ : Belagavi : ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ; ಇಬ್ಬರು ಪೊಲೀಸ್ ವಶಕ್ಕೆ.!

ಆರೋಪಿಗಳ ವಿರುದ್ಧ ತನಿಖೆ ಮಾಡಿ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಬೆಂಗಳೂರಿನ 42ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ ಆದೇಶ ಮಾಡಿದೆ.

ಕೋರ್ಟ್ (court) ಆದೇಶದ ಅನ್ವಯ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img