ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ನಡೆದಿದೆ.
ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.
ಇದನ್ನು ಓದಿ : ಅಕ್ರಮ ಮರಳುಗಾರರ ಪರ ಮಾತನಾಡಿದ ಶಾಸಕರಿಗೆ ಖಡಕ್ ಉತ್ತರ ಕೊಟ್ಟ ಲೇಡಿ ಆಫೀಸರ್.!
ಮಧ್ಯಾಹ್ನ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಬಳಿಕ ಮೆಡಿಕಲ್ ತಪಾಸಣೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದರು.
ಚಾಲಾಕಿ ಆರೋಪಿ ಆಸ್ಪತ್ರೆಯಿಂದಲೇ ಎಸ್ಕೇಪ್ ಆಗಿದ್ದಾನೆ. ಆರೋಪಿಗಾಗಿ ಮತ್ತೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸುಳ್ಯ ಪೋಲೀಸ್ ಠಾಣೆಯ ಪ್ರಕರಣವೊಂದರ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.