ಡಿವೈಡರ್ ಗೆ ಡಿಕ್ಕಿ ಹೊಡೆದ BMW : ಡಿಕ್ಕಿ ರಭಸಕ್ಕೆ ಛಿದ್ರವಾಗಿ ಇಬ್ಬರ ಸಾವು.

ಡಿವೈಡರ್ ಗೆ ಡಿಕ್ಕಿ ಹೊಡೆದ BMW

ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಅಪಘಾತವು ರವಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಸಂಭವಿಸಿದೆ.

ಬಿಎಂಡಬ್ಲ್ಯು Z4 ಕಾರು ಟಿಟ್ವಾಲಾದಿಂದ ಬದ್ಲಾಪುರದತ್ತ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳದಲ್ಲಿಯೇ ಇಬ್ಬರ ಸಾವು:

ಅಪಘಾತದ ತೀವ್ರತೆಗೆ ಕಾರು ಛಿದ್ರಛಿದ್ರವಾಗಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಮೃತರನ್ನು ಬದ್ಲಾಪುರ ನಿವಾಸಿಗಳಾದ ಯೋಗೇಶ್ ದಿಘೆ ಹಾಗೂ ರಿಕೇಬಾ ಜಕಪ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮೂರನೇ ವ್ಯಕ್ತಿ ಆನಂದ್ ಎಂದು ತಿಳಿದುಬಂದಿದ್ದು, ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಜನ್ಮದಿನದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಓದಿ : ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಈ ಕುರಿತು ಮಾಹಿತಿ ನೀಡಿರುವ ಬದ್ಲಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ವಿಧಿವಿಜ್ಞಾನ ತಜ್ಞರ ತಂಡವು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ವಾಹನದ ವೇಗ ಸೇರಿದಂತೆ ವಿವಿಧ ಅಂಶಗಳ ಕುರಿತು ಪರಿಶೀಲನೆ ನಡೆಯುತ್ತಿದ್ದು, ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ಕೇವಲ ₹225ಕ್ಕೆ 75GB ಡೇಟಾ, ಅನ್‌ಲಿಮಿಟೆಡ್ ಕಾಲ್; ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

BMW Z4 ಕಾರು :

ಬಿಎಂಡಬ್ಲ್ಯು (BMW) Z4 ಜರ್ಮನಿಯ ಐಷಾರಾಮಿ ವಾಹನ ತಯಾರಕ ಸಂಸ್ಥೆಯ ಜನಪ್ರಿಯ ಸ್ಪೋರ್ಟ್ಸ್ ಕಾರುಗಳಲ್ಲಿ ಒಂದಾಗಿದೆ. ಆಕರ್ಷಕ ವಿನ್ಯಾಸ, ಹೆಚ್ಚಿನ ಸಾಮರ್ಥ್ಯದ ಎಂಜಿನ್ ಹಾಗೂ ವೇಗದ ಕಾರ್ಯಕ್ಷಮತೆಯಿಂದ ಈ ಕಾರು ವಾಹನ ಪ್ರಿಯರ ಗಮನ ಸೆಳೆಯುತ್ತದೆ.

ಮಾದರಿಯ ಆಧಾರದ ಮೇಲೆ ಈ ಕಾರು ಗಂಟೆಗೆ 250 ಕಿಲೋಮೀಟರ್‌ವರೆಗೆ ವೇಗ ತಲುಪುವ ಸಾಮರ್ಥ್ಯ ಹೊಂದಿದೆ.

ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳು ಮತ್ತು ಪ್ರೀಮಿಯಂ ಸೌಲಭ್ಯಗಳಿಂದ ಇದು ಐಷಾರಾಮಿ ಸ್ಪೋರ್ಟ್ಸ್ ಕಾರುಗಳ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಭಾರತದಲ್ಲಿಯೂ ಬಿಎಂಡಬ್ಲ್ಯು Z4 ಕಾರಿಗೆ ಉತ್ತಮ ಬೇಡಿಕೆ ಇದೆ.

ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.


Disclaimer :BMW ಕಾರು ಅಪಘಾತ ಲೇಖನವು ಪ್ರಾಥಮಿಕ ಮಾಹಿತಿಯನ್ನು ಆಧರಿಸಿದ್ದು, ಪೊಲೀಸ್ ತನಿಖೆ ಪೂರ್ಣಗೊಂಡ ನಂತರ ಅಧಿಕೃತ ವಿವರಗಳಲ್ಲಿ ಬದಲಾವಣೆಗಳಾಗಬಹುದು.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top