ಅನ್ನಭಾಗ್ಯ ಯೋಜನೆಗೆ ಬಿಗ್ ಅಪ್‌ಡೇಟ್: 14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್‌ಗಳ ಮೇಲೆ ಕತ್ತರಿ ಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಅನ್ನಭಾಗ್ಯ ಯೋಜನೆ”ಯೂ ಒಂದು. ಈ ಕುರಿತಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಸೂಚನೆಗಳು ದೊರಕಿವೆ.

ಈಗಾಗಲೇ ಗೃಹಲಕ್ಷ್ಮಿ (Gruha Lakshmi Scheme) ಹಾಗೂ ಗೃಹಜ್ಯೋತಿ ಯೋಜನೆಗಳ (Gruha Jyothi Scheme) ಪರಿಷ್ಕರಣೆ ಚರ್ಚೆಯಲ್ಲಿರುವ ಬೆನ್ನಲ್ಲೇ, ಇದೀಗ “ಅನ್ನಭಾಗ್ಯ ಯೋಜನೆ”ಯಲ್ಲೂ ಕೆಲವು ಪ್ರಮುಖ ಬದಲಾವಣೆಗಳು ಆಗುವ ಸಾಧ್ಯತೆ ಹೆಚ್ಚಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಈ ಕುರಿತು ಮಹತ್ವದ ಸುಳಿವು ನೀಡಿದ್ದು, ಯೋಜನೆ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅನರ್ಹ BPL ಕಾರ್ಡ್‌ಗಳ ವಿರುದ್ಧ ಕ್ರಮ :

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರಸ್ತುತ “13 ರಿಂದ 14 ಲಕ್ಷದಷ್ಟು ಅನರ್ಹರು BPL ಕಾರ್ಡ್ ಹೊಂದಿರುವುದು ಸರ್ಕಾರದ ಗಮನಕ್ಕೆ ಬಂದಿವೆ” ಎಂದು ಹೇಳಿದ್ದಾರೆ. ಇಂತಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಓದಿ : ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಸರ್ಕಾರ ಈಗಾಗಲೇ ಅನರ್ಹರ ಕುರಿತ ವರದಿ ಸಂಗ್ರಹಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಈ ಕ್ರಮದಿಂದ ಸರ್ಕಾರದ ವೆಚ್ಚ ಕಡಿಮೆಯಾಗುವುದರ ಜೊತೆಗೆ ನಿಜವಾದ ಬಡ ಕುಟುಂಬಗಳಿಗೆ ಯೋಜನೆಯ ಲಾಭ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲಿದೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.

APL ಗೆ ವರ್ಗಾವಣೆ :

ಅನರ್ಹ ಫಲಾನುಭವಿಗಳು ಸ್ವಯಂಪ್ರೇರಿತವಾಗಿ ತಮ್ಮ BPL ಕಾರ್ಡ್‌ಗಳನ್ನು “APL ಕಾರ್ಡ್‌ಗೆ ವರ್ಗಾಯಿಸಿಕೊಳ್ಳಬೇಕು” ಎಂದು ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಆದರೆ ಹಲವರು ಇನ್ನೂ ಬದಲಾವಣೆ ಮಾಡದಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ.

ಸಂಪುಟ ಉಪಸಮಿತಿ ಸಭೆ ಬಗ್ಗೆ ಸ್ಪಷ್ಟನೆ :

ಇದೇ ವೇಳೆ ನಡೆದ ಸಂಪುಟ ಉಪಸಮಿತಿ ಸಭೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವ ಮುನಿಯಪ್ಪ, ಸಭೆ ಯಾವ ಉದ್ದೇಶಕ್ಕಾಗಿ ಕರೆಯಲಾಗಿದೆ ಎಂಬುದು ಸ್ಪಷ್ಟವಿಲ್ಲ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಿರುವ ಅವರು, ಆಹಾರ ಇಲಾಖೆಗೆ ಸಂಬಂಧಿಸಿದ ವಿಚಾರಗಳಿದ್ದರೆ ಪ್ರತ್ಯೇಕ ಸಭೆ ಕರೆಯಲಾಗುತ್ತದೆ ಎಂದಿದ್ದಾರೆ.

ಇದನ್ನು ಓದಿ : ಕೇವಲ ₹225ಕ್ಕೆ 75GB ಡೇಟಾ, ಅನ್‌ಲಿಮಿಟೆಡ್ ಕಾಲ್; ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ರಾಜ್ಯದಲ್ಲಿ ಈಗಾಗಲೇ ಹಲವು ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅನ್ನಭಾಗ್ಯ ಯೋಜನೆಯಲ್ಲೂ ಬದಲಾವಣೆ ಆಗುತ್ತದೆಯೇ ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ.

BPL ಕಾರ್ಡ್ :

ಬಿಪಿಎಲ್ ಕಾರ್ಡ್ (Below Poverty Line Card – BPL) ಎಂದರೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರ ನೀಡುವ ವಿಶೇಷ ಗುರುತಿನ ಕಾರ್ಡ್ ಆಗಿದೆ.

ಈ ಕಾರ್ಡ್ ಹೊಂದಿರುವವರಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯಗಳು, ಉಚಿತ ಅಥವಾ ಸಬ್ಸಿಡಿ ಆಧಾರಿತ ಸರ್ಕಾರಿ ಯೋಜನೆಗಳ ಸೌಲಭ್ಯಗಳು ಲಭ್ಯವಾಗುತ್ತವೆ.

ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳು ಹೆಚ್ಚಾಗಿ ಬಿಪಿಎಲ್ ಕಾರ್ಡ್ ಆಧಾರದಲ್ಲೇ ಜಾರಿಯಾಗುತ್ತವೆ.

ಕುಟುಂಬದ ಆದಾಯ, ಆರ್ಥಿಕ ಸ್ಥಿತಿ ಮತ್ತು ಇತರೆ ಮಾನದಂಡಗಳನ್ನು ಪರಿಶೀಲಿಸಿ ಈ ಕಾರ್ಡ್ ನೀಡಲಾಗುತ್ತದೆ. ಅರ್ಹರಲ್ಲದವರು ಈ ಸೌಲಭ್ಯ ಪಡೆಯುವುದರಿಂದ ನಿಜವಾದ ಬಡವರಿಗೆ ತಲುಪಬೇಕಾದ ನೆರವು ಕಡಿಮೆಯಾಗುವ ಸಾಧ್ಯತೆ ಇರುತ್ತದೆ.

ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.


Disclaimer : ಅನರ್ಹ BPL ಕಾರ್ಡ್‌ಗಳ ಲೇಖನವು ಸಾರ್ವಜನಿಕವಾಗಿ ಲಭ್ಯವಿರುವ ವರದಿಗಳು ಹಾಗೂ ಸಚಿವರ ಹೇಳಿಕೆಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಸರ್ಕಾರದ ಅಧಿಕೃತ ಆದೇಶ ಅಥವಾ ಅಂತಿಮ ನಿರ್ಧಾರ ಪ್ರಕಟವಾದ ಬಳಿಕ ನಿಯಮಗಳಲ್ಲಿ ಬದಲಾವಣೆ ಸಾಧ್ಯ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top