Advertisement

Advertisement

Belagavi DCC Bank ನೇಮಕಾತಿ: SSLC, ಪದವೀಧರರಿಗೆ ಬ್ಯಾಂಕ್ ಉದ್ಯೋಗದ ಭರ್ಜರಿ ಅವಕಾಶ.!

Belagavi DCC Bank ನೇಮಕಾತಿ

ಬೆಳಗಾವಿ : ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. SSLC ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೇತನ, ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

Belagavi DCC Bank ನೇಮಕಾತಿ :

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ. “ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ (Belagavi DCC Bank)” ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 104 ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಆದ ಅಭ್ಯರ್ಥಿಗಳಿಂದ ಹಿಡಿದು ಯಾವುದೇ ವಿಷಯದಲ್ಲಿ ಪದವಿ ಪಡೆದವರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯಾವ ಹುದ್ದೆಗಳಿಗೆ ನೇಮಕಾತಿ?

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 104 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

  • ಎರಡನೇ ವಿಭಾಗೀಯ ಗುಮಾಸ್ತ (SDC / Junior Assistant) : 83 ಹುದ್ದೆಗಳು.
  • ಪಿಯೋನ್ (Peon / Attender / Helper) : 20 ಹುದ್ದೆಗಳು.
  • ಗನ್‌ಮ್ಯಾನ್ (Gunman) : 1 ಹುದ್ದೆ.

ಶೈಕ್ಷಣಿಕ ಅರ್ಹತೆ :

ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

  • SDC / Junior Assistant: BA, B.Sc., B.Com. ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ.
  • ಪಿಯೋನ್: ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣ.
  • ಗನ್‌ಮ್ಯಾನ್: ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣ.

ವಯೋಮಿತಿ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು,

  • ಕನಿಷ್ಠ 18 ವರ್ಷ ಹಾಗೂ
  • ಗರಿಷ್ಠ 35 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

  • OBC ಅಭ್ಯರ್ಥಿಗಳಿಗೆ : 3 ವರ್ಷ.
  • SC/ST ಅಭ್ಯರ್ಥಿಗಳಿಗೆ : 5 ವರ್ಷ.
  • ಮಹಿಳಾ ಅಭ್ಯರ್ಥಿಗಳಿಗೆ : 10 ವರ್ಷ.
  • ಅಂಗವಿಕಲ (PWD) ಅಭ್ಯರ್ಥಿಗಳಿಗೆ : 10 ವರ್ಷ.

ವೇತನ ಶ್ರೇಣಿ :

ಹುದ್ದೆವೇತನ
ದ್ವಿತೀಯ ದರ್ಜೆ ಗುಮಾಸ್ತರುರೂ. 53,150 – ರೂ. 1,15,150
ಗನ್‌ಮ್ಯಾನ್ರೂ. 47,650 – ರೂ. 1,05,650
ಸಿಪಾಯಿರೂ. 42,650 – ರೂ. 96,650
  • ಬ್ಯಾಂಕ್ ಸೇವೆಯ ಇತರೆ ಸೌಲಭ್ಯಗಳು ಹಾಗೂ ಭತ್ಯೆಗಳು ಕೂಡ ನಿಯಮಾನುಸಾರ ಲಭ್ಯವಾಗಲಿವೆ.

ಅರ್ಜಿ ಶುಲ್ಕ :

  • ಸಾಮಾನ್ಯ / OBC ಅಭ್ಯರ್ಥಿಗಳು : ₹1,000/-
  • SC/ST ಅಭ್ಯರ್ಥಿಗಳು : ₹500/-
  • ಮಾಜಿ ಸೈನಿಕರು : ₹500/-
  • ಅಂಗವಿಕಲ (PWD) ಅಭ್ಯರ್ಥಿಗಳು : ₹500/-

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ನೇಮಕಾತಿ ಎರಡು ಹಂತಗಳಲ್ಲಿ ನಡೆಯಲಿದೆ.

  • ಲಿಖಿತ ಪರೀಕ್ಷೆ
  • ಸಂದರ್ಶನ

ಮೊದಲ ಹಂತದ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಬಳಿಕ ಎರಡೂ ಹಂತಗಳ ಸಾಧನೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಪ್ರಮುಖ ದಿನಾಂಕಗಳು :

  • ಆನ್‌ಲೈನ್ ಅರ್ಜಿ ಆರಂಭ : 27 ಜುಲೈ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನ : 27 ಆಗಸ್ಟ್ 2026

Note : ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೇ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಪ್ರಮುಖ ಲಿಂಕ್‌ :

APPLY ONLINE

ಅರ್ಜಿ ಸಲ್ಲಿಸುವ ವಿಧಾನ :

  1. ಅಭ್ಯರ್ಥಿಗಳು ಮೊದಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ತಮ್ಮ ಅರ್ಹತೆಯನ್ನು ಪರಿಶೀಲಿಸಬೇಕು.
  2. ನಂತರ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಅರ್ಹತೆ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಸರಿಯಾಗಿ ನಮೂದಿಸಬೇಕು.
  3. ಬಳಿಕ ಸಂಬಂಧಿತ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಬೇಕು.
  4. ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟ್‌ಔಟ್ ಅಥವಾ ಅರ್ಜಿ ಸಂಖ್ಯೆಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಸೂಕ್ತ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರ ಉದ್ಯೋಗದ ಕನಸು ಕಾಣುತ್ತಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ನೇಮಕಾತಿ ಉತ್ತಮ ಅವಕಾಶವಾಗಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಒಳಿತು.

ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ 


Disclaimer:  ಅರ್ಜಿ ಸಲ್ಲಿಸುವ ಮೊದಲು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCC Bank) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ಅರ್ಹತೆ, ಹುದ್ದೆಗಳ ಸಂಖ್ಯೆ, ದಿನಾಂಕ, ಶುಲ್ಕ ಹಾಗೂ ಇತರೆ ನಿಯಮಗಳಲ್ಲಿ ಯಾವುದೇ ಬದಲಾವಣೆಗಳಿದ್ದರೆ ಅಧಿಕೃತ ಅಧಿಸೂಚನೆಯಲ್ಲಿರುವ ಮಾಹಿತಿಯೇ ಅಂತಿಮವಾಗಿರುತ್ತದೆ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top