Friday, September 20, 2024
spot_img
spot_img
spot_img
spot_img
spot_img
spot_img
spot_img

ಕೈಕಾಲು ಕಟ್ಟಿ 16ರ ಬಾಲಕಿ ಮೇಲೆ ಅತ್ಯಾಚಾರ ; ಗರ್ಭಿಣಿ ಎಂದಾಗ ಕಾಮುಕ ಪರಾರಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಯುವಕನೋರ್ವ, 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ (rape) ಗರ್ಭಿಣಿ ಮಾಡಿ ಎಸ್ಕೇಪ್ ಆದ ಘಟನೆ ನಡೆದಿದೆ.

ಸುರೇಶ್ ಎಂಬಾತ ಈ ದುಷ್ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಈತ 16 ವರ್ಷದ ಬಾಲಕಿಯನ್ನು ಗರ್ಭಿಣಿ (pregnant) ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಅಕ್ರಮ ಸಂಬಂಧ ಶಂಕೆ : ಪತ್ನಿಯ ರುಂಡ ಕತ್ತರಿಸಿ ಊರೆಲ್ಲ ಸುತ್ತಾಡಿದ ಸೈಕೋ ಗಂಡ ; Video Viral.!

ಬಾಲಕಿ ಮೇಕೆ ಮೇಯಿಸಲು ಹೋಗುತ್ತಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಕೈ-ಕಾಲು ಕಟ್ಟಿ ಅತ್ಯಾಚಾರವೆಸಗಿದ್ದಾನೆ. ಈ ಕೃತ್ಯಕ್ಕೆ ಮಹಿಳೆಯೊಬ್ಬಳ ಸಹಕಾರ (cooperation) ಇತ್ತು ಎನ್ನಲಾಗಿದೆ.

ಇನ್ನೂ ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದಾನೆ. ಮದುವೆ ಆಗ್ತೀನಿ ಅಂತ ನಂಬಿಸಿ, ಪದೇ ಪದೇ ಬಲವಂತವಾಗಿ ದೈಹಿಕ ಸಂಪರ್ಕವನ್ನು (Physical contact) ಬೆಳೆಸಿದ್ದಾನೆ ಎನ್ನಲಾಗಿದೆ.

ಬಾಲಕಿ ತನಗೆ ಅರಿವಿಲ್ಲದೆ ಏಳು ತಿಂಗಳ ಗರ್ಭಿಣಿಯಾಗಿದ್ದಾಳೆ. ಆಕೆಯ ಆರೋಗ್ಯದಲ್ಲಿ ಏರುಪೇರಾಗಿದ್ದನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯಕೀಯ ಪರೀಕ್ಷೆ (Medical examination) ನಡೆಸಿದಾಗ ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ.

ಇದನ್ನು ಓದಿ : ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ನಾಲ್ವರು Arrest.!

ಪ್ರಕರಣ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Chintamani rural police station) ದೂರು ದಾಖಲಾಗಿದೆ. ಪರಾರಿ ಆಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img