Thursday, April 25, 2024
spot_img
spot_img
spot_img
spot_img
spot_img
spot_img

ಅಜ್ಜನ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ; ರಕ್ಷಿಸಲು ಹರಸಾಹಸ.!

spot_img

ಜನಸ್ಪಂದನ ನ್ಯೂಸ್, ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಸಿಎಂಗೆ ಬಹಿರಂಗ ಸವಾಲ್ ಹಾಕಿದ ಜಿ.ಟಿ.ದೇ.!

ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ (2) ಎಂಬ ಬಾಲಕ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಶಂಕರಪ್ಪ ಮುಜಗೊಂಡ ಎಂಬುವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. 500 ಅಡಿಯಷ್ಟು ಕೊರೆದರೂ ನೀರು ಬಂದಿರಲಿಲ್ಲ. ಹಾಗಾಗಿ ಮುಚ್ಚದೇ ಹಾಗೆಯೇ ಬಿಟ್ಟಿದ್ದರು ಎನ್ನಲಾಗಿದೆ. ಈಗ ಅವರ ಮೊಮ್ಮಗನೇ ಈ ಕೊಳವೆ ಬಾವಿಗೆ ಬದ್ದಿದ್ದಾನೆ.

Poison : ಹಾವೂ ಕಚ್ಚಿದಾಗ ಮನುಷ್ಯ ಏಕೆ ಸಾಯುತ್ತಾನೆ ಗೊತ್ತೇ ; ಈ ವೈರಲ್‌ ವಿಡಿಯೋ ನೋಡಿ.!

ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೊಳವೆ ಬಾವಿಯಲ್ಲಿರುವ ಮಗುವಿಗೆ ಆಕ್ಸಿಜನ್ ಪೂರೈಸಲು ಯತ್ನ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಇಂಡಿ ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸುತ್ತಿದ್ದಾರೆ. ಇಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

spot_img
spot_img
spot_img
- Advertisment -spot_img