Wednesday, May 22, 2024
spot_img
spot_img
spot_img
spot_img
spot_img
spot_img

ಮದುವೆ ಸಂಭ್ರಮಕ್ಕೆ ಬಂದು WhatsApp ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಖ್ಯಾತ ನಟಿ.!

spot_img

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಖ್ಯಾತ ನಟಿಯ ಓರ್ವಳು ಅಪಾರ್ಟ್‌ಮೆಂಟ್‌ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಬಿಹಾರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಭೋಜ್‌ಪುರಿ ನಟಿ ಅಮೃತಾ ಪಾಂಡೆ (Amrita Pandey) ಶನಿವಾರ ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಮೃತಾ ಪಾಂಡೆ (Amrita Pandey) ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಮೃತಾ ಪಾಂಡೆ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ : ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅಮೃತಾ ಪಾಂಡೆ ಅವರು ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ್ದು, ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ ಮೇಲೆ ತನ್ನ ರೂಮಿಗೆ ಹೋಗಿ ನೇಣಿಗೆ ಶರಣಾಗಿದ್ದಾರೆ.

ಆಕೆಯ ಅಪಾರ್ಟ್‌ಮೆಂಟ್‌ನಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲವಾದರೂ, ಅಮೃತ ಪಾಂಡೆ ಅವರು ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ “ಎರಡು ದೋಣಿಗಳಲ್ಲಿ ಜೀವನ ಸಾಗುತ್ತಿತ್ತು, ನಾವು ದೋಣಿಯನ್ನು ಮುಳುಗಿಸಿ ಪ್ರಯಾಣವನ್ನು ಸುಲಭಗೊಳಿಸಿದೆವು” ಎನ್ನುವ ಹಿಂದಿ ಸಾಲುಗಳನ್ನು ಹಾಕಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ : strange culture : ಭಾರತದ ಈ ಊರಲ್ಲಿ ಹೆಣ್ಣು ಮಕ್ಕಳು ಬಾಡಿಗೆಗೆ ಸಿಗ್ತಾರಂತೆ.!  

ಅಮೃತ ಪಾಂಡೆ ಅವರ ಸ್ನೇಹಿತರು, ಸಂಬಂಧಿಕರ ಪ್ರಕಾರ ಇತ್ತೀಚೆಗೆ ಅವರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಮಾನಸಿಕ ಖಿನ್ನತೆಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಡಿಪ್ರೆಷನ್‌ನಿಂದ ನಟಿ ಅಮೃತ ಪಾಂಡೆ ಅವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಅಮೃತಾ ಅವರ ಕುಟುಂಬ ಮತ್ತು ಅವರ ಪತಿ ಇನ್ನೂ ಸಾರ್ವಜನಿಕವಾಗಿ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಪೊಲೀಸರು ಅಮೃತ ಪಾಂಡೆ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜನಸ್ಪಂದನ ನ್ಯೂಸ್‌, ಕಳಕಳಿಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img