Wednesday, May 22, 2024
spot_img
spot_img
spot_img
spot_img
spot_img
spot_img

Election – 2024 : ಮತಗಟ್ಟೆಯಲ್ಲಿಯೇ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು.!

spot_img

ಜನಸ್ಪಂದನ ನ್ಯೂಸ್‌,  ಚಿತ್ರದುರ್ಗ : ಲೋಕಸಭೆ ಚುನಾವಣೆಗೆ ರಾಜ್ಯದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಅಲ್ಲಲ್ಲಿ ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಬಹುತೇಕ ಶಾಂತಿಯುತ ಮತದಾನವಾಗಿದೆ.

ಈ ನಡುವೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ.

ಮತಗಟ್ಟೆಯಲ್ಲಿ BJP ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ.!

ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು, ಆದರೆ ದಾರಿ ಮಧ್ಯದಲ್ಲೇ ಮೃತಪಟ್ಟರು.

ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Health : ಒಂದು ತಿಂಗಳು ಅನ್ನ ಸೇವಿಸುವುದನ್ನು ಬಿಟ್ಟರೆ ಏನಾಗುವುದು.?

ಮೃತ ಶಿಕ್ಷಕಿ ಯಶೋದಮ್ಮ ಚಲ್ಲೆಕೇರಿ ತಾಲೂಕಿನ ಬೊಮ್ಮಸಂದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img