Saturday, September 21, 2024
spot_img
spot_img
spot_img
spot_img
spot_img
spot_img
spot_img

ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾ*ಮಾರಿ ; ಓರ್ವ ಸ್ವಾಮೀಜಿ *ತ್ಯೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಕೋಲಾರ : ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಹಿನ್ನಲೆಯಲ್ಲಿ ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆ ನಡೆದಿದೆ. ಹತ್ಯೆಯಾದ ಸ್ವಾಮೀಜಿಯನ್ನು ಆಚಾರ್ಯ ಚಿನ್ಮಯಾನಂದ (65) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. 

ಇದನ್ನು ಓದಿ : ಶಾಲೆ ಹತ್ತಿರದ ಪೊದೆಯೊಂದರಲ್ಲಿ ಬೆ*ಲೆ ಮಹಿಳೆಯ ಮೃ*ದೇಹ ಪತ್ತೆ : ಅತ್ಯಾ*ರ ಶಂಕೆ.! 

ಗಂಭೀರ ಗಾಯಗೊಂಡ ಚಿನ್ಮಯಾನಂದ ಅವರನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ. ಇಲ್ಲಿ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮೆರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಮಾಲೂರು ತಾಲ್ಲೂಕು ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಆಶ್ರಮದ ಜಾಗಕ್ಕಾಗಿ ಬಹುದಿನಗಳಿಂದ ವಿವಾದ ನಡೆಯುತ್ತಿತ್ತು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img