Saturday, July 13, 2024
spot_img
spot_img
spot_img
spot_img
spot_img
spot_img

ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಜುಲೈ 09 ರಂದು ಹುಬ್ಬಳ್ಳಿಯಲ್ಲಿ ಬೃಹತ್‌ ಉದ್ಯೋಗ ಮೇಳ.!

spot_img

ಹುಬ್ಬಳ್ಳಿ : ಉದ್ಯೋಗ ವಿನಿಮಯ ಕಛೇರಿ ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಉದ್ಯೋಗ ಮೇಳವನ್ನು ಜುಲೈ 9 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅದರಗುಂಚಿಯ ಸಿ.ಆಯ್.ಸಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 20 ಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ಸಂಸ್ಥೆಗಳಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. 18 ರಿಂದ 35 ವಯೋಮಿತಿಯ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನು ಓದಿ : ಗ್ರೂಪ್ – C ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ; ನಾಳೆಯೇ (ದಿ.08) ಕೊನೆಯ ದಿನ.!

ಈ ದಾಖಲಾತಿಗಳನ್ನು ತರಲು ಸೂಚನೆ :

ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್, ಬಯೋಡಾಟಾ ಅಥವಾ ರೆಸ್ಯೂಮ್‌ಗಳ ಹೆಚ್ಚಿನ ಪ್ರತಿಗಳೊಂದಿಗೆ (ಕನಿಷ್ಟ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಮೇಳಕ್ಕೆ ಹಾಜರಾಗಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು https://shorturl.at/qXip9 ವೆಬ್‌ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.

ಇದನ್ನು ಓದಿ : SSLC ಪಾಸಾದವರಿಗೆ ರೂ.29,000/- ಸಂಬಳ ; ಕರ್ನಾಟಕದಲ್ಲೇ ಉದ್ಯೋಗಾವಕಾಶ.!

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ :
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9535360259, 8453208555 , 9806905751 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

spot_img
spot_img
- Advertisment -spot_img